ಮಡಿಕೇರಿ ಮಾ.24 : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ.ಜಾತಿ/ ಪ.ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಡಾ.ಬಾಬು ಜಗಜೀವನ್‍ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ ನೀಡಲಾಗುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್, 27 ಕೊನೆಯ ದಿನವಾಗಿದೆ. ಪ್ರಶಸ್ತಿ ಪಡೆಯಲು ಯಾವುದೇ ಜನಾಂಗ, ಲಿಂಗ, ಜಾತಿ ಅಥವಾ ಸಮುದಾಯದ ವ್ಯತ್ಯಾಸವಿಲ್ಲದೆ ಅಥವಾ ತಾರತಮ್ಯವಿಲ್ಲದೆ ಈ ಪ್ರಶಸ್ತಿಗೆ ಯಾವುದೇ ಭಾರತೀಯರು ಮತ್ತು ಸಂಸ್ಥೆಯವರು ಅರ್ಜಿ ಸಲ್ಲಿಸಬಹುದು.
ಪರಿಶಿಷ್ಟ ಜಾತಿಯವರ ಮೇಲೆ ನಡೆಯುತ್ತಿರುವ ಅಸ್ಪೃಶ್ಯತೆ ನಿವಾರಣೆ ಮಾಡಲು ಹಾಗೂ ದೌರ್ಜನ್ಯ ಅಪರಾಧಗಳ ನಿಯಂತ್ರಣದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿ/ ಸರ್ಕಾರೇತರ ಸಂಘ ಸಂಸ್ಥೆಗಳಾಗಿರಬೇಕು. ಪರಿಶಿಷ್ಟ ಜಾತಿ ಜನಾಂಗದವರ ಅಭಿವೃದ್ಧಿಗೆ ಕಳೆದ 5 ವರ್ಷಗಳಿಂದ ಕೆಲಸ ಮಾಡುತ್ತಿರುವ, ನೋಂದಣಿಯಾಗಿರುವ ಸರ್ಕಾರೇತರ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ 08272-225531. ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ-08272-223552. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-08276-281115, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*