ಮಡಿಕೇರಿ ಮಾ.24 : ಮುಸಲ್ಮಾನರ ಧಾರ್ಮಿಕ ಭಾವನೆಗೆ ದಕ್ಕೆ ತಂದಿರುವ ಶಾಸಕ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿಯ ಬದ್ರಿಯಾ ಜಮಾಅತ್ ಒತ್ತಾಯಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಜಮಾಅತ್ ಕಾರ್ಯದರ್ಶಿ ಎಂ.ಉಮ್ಮರ್, ಕೊಡಗಿನ ಗೋಣಿಕೊಪ್ಪಲು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಶಾಸಕ ಈಶ್ವರಪ್ಪ ಅವರು ಮಸೀದಿಯಲ್ಲಿ ಕರೆಕೊಡುವ “ಅಝಾನ್” ಮತ್ತು ಅಲ್ಲಾಹುವಿನ ಬಗ್ಗೆ ಅಸಂವಿಧಾನಿಕವಾಗಿ ನೀಡಿರುವ ಹೇಳಿಕೆ ಖಂಡನೀಯ ಎಂದು ತಿಳಿಸಿದ್ದಾರೆ.
ಮಸೀದಿಯಿಂದ ನಮಾಜಿಗೆ ಕರೆಕೊಡುವ “ಅಝಾನ್” ಮತ್ತು ಅಲ್ಲಾಹುವಿನ ಬಗ್ಗೆ ಮಾತನಾಡಿ ಇಸ್ಲಾಂ ಧರ್ಮವನ್ನು ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇತ್ತೀಚೆಗೆ ನಡೆದ ಬದ್ರಿಯಾ ಜಮಾಅತ್ ನ ವಾರ್ಷಿಕ ಮಹಾಸಭೆಯಲ್ಲಿ ಈಶ್ವರಪ್ಪ ಅವರ ಹೇಳಿಕೆಯನ್ನು ಖಂಡಿಸಲಾಗಿದೆ. ಈ ರೀತಿಯ ಸಂವಿಧಾನ ವಿರೋಧಿ ಹೇಳಿಕೆಯಿಂದ ಸಮಾಜದಲ್ಲಿ ಅಶಾಂತಿ ಮೂಡುವುದರಿಂದ ಸರ್ಕಾರ ತಕ್ಷಣ ಈಶ್ವರಪ್ಪ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಉಮ್ಮರ್ ಒತ್ತಾಯಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*