ಮಡಿಕೇರಿ ಮಾ.24 : ಕೋಮು ಪ್ರಚೋದನೆ ಭಾಷಣ ಮಾಡಿದವರು ಊರು ಬಿಟ್ಟು ಹೋಗುತ್ತಾರೆ. ಆದರೆ ಭಾಷಣದಿಂದ ಪ್ರೇರಿತರಾದವರು ಕೇಸ್ ಹಾಕಿಸಿಕೊಂಡು ಕೋರ್ಟ್ ಗೆ ಅಲೆಯುತ್ತಾರೆ, ಮಹಿಳೆಯರು ಮನೆಯಲ್ಲಿ ಕಣ್ಣೀರು ಹಾಕುತ್ತಿರುತ್ತಾರೆ ಎಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಪೊನ್ನಂಪೇಟೆಯಲ್ಲಿ ನಡೆದ ಕಾಂಗ್ರೆಸ್ ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕೋಮು ಭಾವನೆಗಳನ್ನು ಕೆರಳಿಸಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಪ್ರತೀ ಮಹಿಳೆಯರ ಬ್ಯಾಂಕ್ ಖಾತೆಗೆ ವಾರ್ಷಿಕ 24 ಸಾವಿರ ರೂ. ಸಂದಾಯವಾಗಲಿದೆ. ಹೀಗಾಗಿ ಮಹಿಳೆಯರು ಕಡ್ಡಾಯವಾಗಿ ಬ್ಯಾಂಕ್ ಖಾತೆ ತೆರೆಯಿರಿ ಎಂದು ಸಲಹೆ ನೀಡಿದರು.










