ಮಡಿಕೇರಿ ಮಾ.25 : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ಕ್ರಮವನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಇಂದಿರಾ ಗಾಂಧಿ ವೃತ್ತ ದಲ್ಲಿ ಜಮಾಯಿಸಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಚಂದ್ರಮೌಳಿ, ಕೆಪಿಸಿಸಿ ವಕ್ತಾರ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಕಾಂಗ್ರೆಸ್ ನಾಯಕ ಸಂಕೇತ್ ಪೂವಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹೆಚ್.ಎ.ಹಂಸ, ಮಡಿಕೇರಿ ನಗರಾಧ್ಯಕ್ಷ ಬಿ.ವೈ.ರಾಜೇಶ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಎಂ.ಇಸ್ಮಾಯಿಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಸೇವಾದಳ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರಾ ಮೈನ, ಪ್ರಮುಖರಾದ ಆರ್.ಪಿ.ಚಂದ್ರಶೇಖರ್, ಚುಮ್ಮಿದೇವಯ್ಯ, ಜಫ್ರುಲ್ಲ, ಮುಕ್ಕಟೀರ ಸಂದೀಪ್, ಕೆ.ಜಿ.ಪೀಟರ್, ಎ.ಟಿ.ದೇವಯ್ಯ, ಟಿ.ಹೆಚ್.ಉದಯ ಕುಮಾರ್, ವೆಂಕಟೇಶ್ ಹಾಗೂ ಡಿಸಿಸಿ ಸದಸ್ಯರು, ಹಿರಿಯ ನಾಯಕರು, ವಿವಿಧ ಘಟಕದ ಅಧ್ಯಕ್ಷರು, ಸದಸ್ಯರು ಮತ್ತು ಪದಾಧಿಕಾರಿಗಳು ಪಾಲ್ಗೊಂಡಿದ್ದರು.