ಮಡಿಕೇರಿ ಮಾ.26 : ಅಂತರರಾಷ್ಟ್ರೀಯ ಜನಾಂಗೀಯ ತಾರತಮ್ಯ ನಿರ್ಮೂಲನೆ ದಿನದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನಲ್ಲಿ 1785 ರಲ್ಲಿ ಹತ್ಯೆಗೀಡಾದ ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿತು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮಾತನಾಡಿ ಕೊಡವ ಜನಾಂಗದ ಮೇಲೆ ಜನಾಂಗೀಯ ತಾರತಮ್ಯ ನಿರಂತರವಾಗುತ್ತಿದೆ. ಸಾಂವಿಧಾನಿಕವಾಗಿ ದೊರೆಯಬೇಕಾದ ಹಕ್ಕುಗಳನ್ನು ನೀಡದೆ ವಂಚಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಟಿಪ್ಪು ಕಾಲದಲ್ಲಿ ದೇವಟ್ ಪರಂಬುವಿನಲ್ಲಿ ವಂಚನೆಯಿಂದ ವೀರ ಬುಡಕಟ್ಟು ಕೊಡವರನ್ನು ಹತ್ಯೆ ಮಾಡಲಾಗಿದೆ. ಧೀರ ಪರಂಪರೆಯ ಅತಿ ಸೂಕ್ಷ್ಮ ಜನಾಂಗದ ಮೇಲೆ ನಡೆದಿರುವ ದಾಳಿಯನ್ನು ಇಡೀ ವಿಶ್ವವೇ ಖಂಡಿಸಬೇಕಾಗಿದೆ. ಸಂಚಿನಿಂದ ಜೀವ ಕಳೆದುಕೊಂಡ ಹಿರಿಯರನ್ನು ಸ್ಮರಿಸಿಕೊಳ್ಳುವುದು ಕೊಡವರ ಕರ್ತವ್ಯವಾಗಿದೆ ಎಂದರು.
ಕೊಡವ ಬುಡಕಟ್ಟು ಜನಾಂಗದ ಸಬಲೀಕರಣಕ್ಕಾಗಿ ಸಿಎನ್‌ಸಿ ಸಂಘಟನೆ ನಡೆಸುತ್ತಿರುವ ಹೋರಾಟಕ್ಕೆ ಅಗಲಿದ ಹಿರಿಯರು ಬೆಂಬಲವಾಗಿ ನಿಂತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ನಾಚಪ್ಪ ಕೊಡವಲ್ಯಾಂಡ್ ಜಿಯೋ-ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕ-ಸ್ವಯಂ ನಿರ್ಣಯ ಹಕ್ಕುಗಳಿಗಾಗಿ ಶಾಂತಿಯುತ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದರು.
ಕೊಡವ ಸಂಸ್ಕಾರ ಗನ್ ಅನ್ನು ಸಿಖ್ಖರ “ಕಿರ್ಪಾನ್” ಗೆ ಸಮಾನವಾಗಿ ನೋಡಬೇಕು. ಕೊಡವ ಬುಡಕಟ್ಟು ಜನಾಂಗಕ್ಕೆ ಎಸ್‌ಟಿ ಟ್ಯಾಗ್ ನೀಡಬೇಕು. ಕೊಡವ ಭಾಷೆಯನ್ನು 8 ನೇ ಶೆಡ್ಯೂಲ್ ಗೆ ಸೇರಿಸಬೇಕು. ದೇವಟ್ಪರಂಬ್ ದುರಂತ ಹತ್ಯಾಕಾಂಡದ ಸ್ಥಳದಲ್ಲಿ, ನಾಲ್ನಾಡ್ ಅರಮನೆ ಮತ್ತು ಮಡಿಕೇರಿ ಕೋಟೆಯಲ್ಲಿ ಅಂತರಾಷ್ಟ್ರೀಯ ಕೊಡವ ನರಮೇಧದ ಸ್ಮಾರಕವನ್ನು ಸ್ಥಾಪಿಸಬೇಕು. ಕೊಡವರ ಹತ್ಯೆಯ ಘಟನೆಗಳನ್ನು ಅಂತರರಾಷ್ಟಿçÃಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಎಂದು ಅವರು ಇದೇ ಸಂದರ್ಭ ಒತ್ತಾಯಿಸಿದರು.
ಪಟ್ಟಮಾಡ ಕುಶ, ಅರೆಯಡ ಗಿರೀಶ್, ಮಂದಪAಡ ಮನೋಜ್, ಮಂದಪAಡ ಸೂರಜ್ ಮತ್ತಿತರರು ಹಾಜರಿದ್ದು ಪುಷ್ಪ ನಮನ ಸಲ್ಲಿಸಿದರು.











