ಮಡಿಕೇರಿ ಮಾ.26 : ಕುಶಾಲನಗರ ಮಹಾತ್ಮಾ ಗಾಂಧಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ನಂಜರಾಯಪಟ್ಟಣ ಪ್ರೌಢಶಾಲೆಯ ಆವರಣದಲ್ಲಿ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ದೊರೆಯಿತು.
ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಿ ಬಿ ಭಾರತೀಶ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಶಿಬಿರದ ಮೂಲಕ ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನ ಮತ್ತು ಗ್ರಾಮೀಣ ಜನರ ಬದುಕು ಸಮಸ್ಯೆಗಳ ಬಗ್ಗೆ ಅರಿಯಲು ಅವಕಾಶವಿದೆ ಎಂದು ಅವರು ಹೇಳಿದರು. ಶಾಲಾ ಕಾಲೇಜು ವಿದ್ಯಾರ್ಥಿಗಳು ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು ಸಾಮಾಜಿಕವಾಗಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮ ಪಾತ್ರ ನಿಭಾಯಿಸಬೇಕಾಗಿದೆ ಎಂದು ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಎನ್ ಎನ್ ಶಂಭುಲಿಂಗಪ್ಪ ಅವರು ಮಾತನಾಡಿ ಶೀಘ್ರದಲ್ಲಿ ಪಾಲ್ಗೊಳ್ಳುವ ಹಲವು ಸಂಪನ್ಮೂಲ ವ್ಯಕ್ತಿಗಳು ನೀಡುವ ಉಪನ್ಯಾಸಗಳನ್ನು ವಿದ್ಯಾರ್ಥಿಗಳು ಅರ್ಥೈಸಿಕೊಳ್ಳಬೇಕು. ಈ ಮೂಲಕ ಹೆಚ್ಚಿನ ಜ್ಞಾನ ಸಂಪಾದನೆಯ ಪ್ರಯೋಜನಗಳನ್ನು ಪಡೆಯುವಂತಾಗಬೇಕು ಎಂದರು. ಪದವಿ ಕಾಲೇಜಿನ ಪ್ರಾಂಶುಪಾಲರಾದ ಟಿ ಎ ಲಿಖಿತ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕ್ಲಾರ ರೇಷ್ಮಾ, ಗಾಯತ್ರಿ, ಶಿಬಿರ ಕಾರ್ಯಕ್ರಮ ಅಧಿಕಾರಿ ಕೆ ಆರ್ ಮಂಜೇಶ್, ಸಹಕಾರ ಸಂಘದ ಅಧ್ಯಕ್ಷ ಬಿ ಸಿ ಮಾದಯ್ಯ, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಚ್ ಬಿ ಮೂರ್ತಿ ಮತ್ತು ಶಿಬಿರಾರ್ಥಿಗಳು ಇದ್ದರು.










