ಮಡಿಕೇರಿ ಮಾ.26 : ಶನಿವಾರಸಂತೆ ಸಮಿಪದ ಮಾಲಂಬಿ ಗ್ರಾಮದ ಶ್ರೀಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ಪೂಜಾ ಮಹೋತ್ಸವ ಮತ್ತು ಶ್ರೀ ಲಕ್ಮಿ ವೆಂಕಟೇಶ್ವರ ದೇವರ ಹರಿಸೇವೆ ಶ್ರದ್ದಾಭಕ್ತಿಯಿಂದ ನೆರವೇರಿತು.
ಮಾಲಂಬಿ ಗ್ರಾಮದ ಶ್ರೀಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿಯು ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಅಕ್ಕಪಕ್ಕದ ತಾಲ್ಲೂಕು ಮತ್ತು ಜಿಲ್ಲೆಗಳಿಂದ ನೂರಾರು ಭಕ್ತರು ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.
ಶ್ರೀಲಕ್ಷ್ಮೀ ವೆಂಟೇಶ್ವರ ದೇವಸ್ಥಾನದ ತಕ್ಕ ಮುಖ್ಯಸ್ಥ ಎಂ.ಡಿ.ಶಿವಪ್ಪ ಅವರ ನೇತೃತ್ವದಲ್ಲಿ ವಾದ್ಯಗೋಷ್ಠಿ ಮೆರವಣಿಗೆ ಮೂಲಕ ಗ್ರಾಮದ ದೇವಸ್ಥಾನದ ಪಕ್ಕದ ಕೆರೆಯಲ್ಲಿ ಗಂಗಾಸ್ನಾನಕ್ಕೆ ತೆರಳಿದರು. ಗಂಗಾಸ್ಥಾನ ಪೂಜೆಸಲ್ಲಿಸಿದ ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಗ್ರಾಮದ ಶ್ರೀ ಕನ್ನಂಬಾಡಿ ಅಮ್ಮನವರ ದೇವಸ್ಥಾನದಲ್ಲಿ ಶ್ರದ್ದಾಭಕ್ತಿಯಿಂದ ಪ್ರದಕ್ಷಣೆ ಮಾಡಿದ ನಂತರ ಶ್ರೀ ಲಕ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ನಡೆಯಿತು. ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. (ವರದಿ : ದಿನೇಶ್ ಮಾಲಂಬಿ , ಶನಿವಾರಸಂತೆ)











