ವಿರಾಜಪೇಟೆ ಮಾ.27 : ನೆಲ್ಲಿಹುದಿಕೇರಿಯ ನಲ್ವತ್ತೆಕ್ರೆ ಗ್ರಾಮದ ಶ್ರೀ ಮಾರಿಯಮ್ಮ ದೇವಸ್ಥಾನದ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು.
ವಾರ್ಷಿಕೋತ್ಸವದ ಅಂಗವಾಗಿ ದೇವಾಲಯದಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆಯಿತು.
ಅರ್ಚಕರು ಶ್ರೀ ದೇವಿಗೆ ವಿಶೇಷ ಅಲಂಕಾರವನ್ನು ಮಾಡಿ, ಕುಂಕುಮಾರ್ಚನೆ, ಪುಷ್ಪರ್ಚನೆ, ಅಭಿಷೇಕವನ್ನು ನೆರವೇರಿಸಿ ಮಹಾ ಮಂಗಳಾರತಿ ಪೂಜೆ ನೆರವೇರಿಸಿದರು.
ನಂತರ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯವರು ಹಾಜರಿದ್ದರು.









