ಮಡಿಕೇರಿ ಮಾ.27 : ಅಭ್ಯತ್‍ಮಂಗಲದ ಶ್ರೀ ವೈದ್ಯನಾಥೇಶ್ವರ ದೇವಾಲಯದ ವಾರ್ಷಿಕೋತ್ಸವ ಹಾಗೂ ವಾರ್ಷಿಕ ನೇಮೋತ್ಸವವು ಏ.8, 9 ಮತ್ತು 10 ರಂದು ನಡೆಯಲಿದೆ.
ಏ.8 ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ವೈದ್ಯನಾಥ ಸ್ವಾಮಿಯ ಭಂಡಾರ ಹೇರಿಕೆ, ರಾತ್ರಿ 10ಗಂಟೆಗೆ ಕೋಟೆದ ಬಬ್ಬುಸ್ವಾಮಿ ಮತ್ತು ತಂಗಡಿ ತನ್ನಿಮಾನಿಗ ದೈವಗಳ ನೇಮೋತ್ಸವ ಜರುಗಲಿದೆ.
ಏ.9 ರಂದು ರಾತ್ರಿ ಶ್ರೀ ಚಾಮುಂಡೇಶ್ವರಿ ಕತ್ತಲಕಾನದ ಗುಳಿಗ ಮತ್ತು ಜಾಗದ ಗುಳಿಗ ಹಾಗೂ ಪಂಜುರ್ಲಿ ಗುಳಿಗ ನೇಮೋತ್ಸವ ನಡೆಯಲಿದ್ದು, ಏ.10 ರಂದು ಬೆಳಿಗ್ಗೆ ರಾಹುಗುಳಿಗ ನೇಮೋತ್ಸವ ನಡೆಯಲಿದೆ.
ಏ.8 ಮತ್ತು 9 ರಂದು ರಾತ್ರಿ 9 ಗಂಟೆಗೆ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.









