ಮಡಿಕೇರಿ ಮಾ.28 : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ 57 ಮಂದಿಗೆ ‘ಸಾಗುವಳಿ ಚೀಟಿ’ಯನ್ನು ಶಾಸಕರಾದ ಕೆ.ಜಿ.ಬೋಪಯ್ಯ ಅವರು ವಿತರಿಸಿದರು.
ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸಾಗುವಳಿ ಚೀಟಿ ವಿತರಿಸಿ ಮಾತನಾಡಿದ ಶಾಸಕರು ಮಡಿಕೇರಿ ತಾಲ್ಲೂಕಿನ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 705 ಅರ್ಜಿಗಳಲ್ಲಿ 545 ಮಂದಿಗೆ ಸಾಗುವಳಿ ಚೀಟಿ ವಿತರಿಸಲಾಗಿದೆ. ಇನ್ನೂ ಯಾರಾದರೂ ಬಿಟ್ಟು ಹೋಗಿದ್ದಲ್ಲಿ ಮೇ, 31 ರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ಇದ್ದು, ಈ ಅವಕಾಶವನ್ನು ಅರ್ಹರು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ಮಾಡಿದರು.
ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವವರಿಗೆ ಸಾಗುವಳಿ ಚೀಟಿ ವಿತರಿಸಲಾಗುತ್ತಿದೆ. ಇದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಶಾಸಕರು ಹೇಳಿದರು.
ಹಕ್ಕು ಪತ್ರ ಪಡೆದವರು ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ಉಲ್ಲಂಘಿಸಿದಂತಾಗುತ್ತದೆ ಎಂದು ಎಚ್ಚರಿಸಿದರು.
ಸರ್ಕಾರ ರೈತರ ಪರವಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಬೆಳೆ ಹಾನಿ ಪರಿಹಾರ, ಕೃಷಿಕರ ಖಾತೆಗೆ 10 ಸಾವಿರ ರೂ. ಸಹಾಯಧನ, ಟಾರ್ಪಲ್ ವಿತರಣೆ, ಕೃಷಿ ಪಂಪ್‍ಸೆಟ್ ಅಳವಡಿಕೆ, ಸಹಾಯಧನದಡಿ ಬಿತ್ತನೆ ಬೀಜ, ಕೃಷಿಕರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು.
ಕೃಷಿಕರು ಸ್ವಾವಲಂಬನೆಯಿಂದ ಬದುಕುವಂತಾಗಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದು ಎಲ್ಲರೂ ಆರ್ಥಿಕವಾಗಿ ಸದೃಢರಾಗಬೇಕು ಎಂದು ಕೆ.ಜಿ.ಬೋಪಯ್ಯ ಅವರು ಕರೆ ನೀಡಿದರು.
ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಅವರು ಮಾತನಾಡಿ ಈಗಾಗಲೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ 705 ಅರ್ಜಿಗಳಲ್ಲಿ 545 ಅರ್ಜಿಗಳಿಗೆ ಸಾಗುವಳಿ ಚೀಟಿ ನೀಡಲಾಗಿದೆ. 5 ಅರ್ಜಿಗಳಿಗೆ ಆಕ್ಷೇಪವಿತ್ತು, ಅದರಲ್ಲಿ ನಾಲ್ಕನ್ನು ಇತ್ಯರ್ಥಪಡಿಸಲಾಗಿದೆ ಎಂದು ತಿಳಿಸಿದರು.
ಅಕ್ರಮ ಸಕ್ರಮದಡಿ ಅರ್ಜಿ ಸಲ್ಲಿಸಿದ ಅರ್ಹರೆಲ್ಲರಿಗೂ ನ್ಯಾಯ ಒದಗಿಸಲು ಪ್ರಯತ್ನಿಸಲಾಗಿದ್ದು, ಸಾಗುವಳಿ ಚೀಟಿ ಪಡೆದವರು ಸಹಕಾರ ಸಂಘದ ಮೂಲಕ ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯಬಹುದಾಗಿದೆ ಎಂದರು.
ಗ್ರಾಮೀಣ ಜನರ ಬದುಕು ಹಸನಾಗುವ ನಿಟ್ಟಿನಲ್ಲಿ ಭವಿಷ್ಯವನ್ನು ಉತ್ತಮ ಪಡಿಸಿಕೊಳ್ಳಲು ಕನಿಷ್ಠ ಭೂಮಿ ಬೇಕಿದೆ. ಆ ನಿಟ್ಟಿನಲ್ಲಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ನಾಗೇಶ್ ಕುಂದಲ್ಪಾಡಿ ಅವರು ಹೇಳಿದರು.
ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಕವಿತಾ ಪ್ರಭಾಕರ್, ಮಿಟ್ಟು ರಂಜಿತ್, ಪೆರಾಜೆಯ ಸುಭಾಷ್, ಕಂದಾಯ ಇಲಾಖೆಯ ಸದಾಶಿವ ಇತರರು ಇದ್ದರು.
Breaking News
- *ಕೊಡಗು ಪತ್ರಿಕಾ ಭವನ ಟ್ರಸ್ಟ್ ನಿಂದ ಗಣರಾಜ್ಯೋತ್ಸವ ಆಚರಣೆ*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಗೌರವಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಗಣತಂತ್ರ ಹಬ್ಬದ ಮೂಲಕ ನಮ್ಮ ದೇಶದ ಸಾಂವಿಧಾನಿಕ ಅನನ್ಯತೆಯನ್ನು ಸಾರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನದ ಆಶಯಗಳಿಗೆ ಬದ್ಧರಾಗಿರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ, ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*