ಮಡಿಕೇರಿ ಮಾ.28 : ಕುಂಬಾರ ವೃತ್ತಿಯನ್ನೇ ನಂಬಿ ಜೀವನ ಸಾಗಿಸುತ್ತಿರುವ ಕುಂಬಾರ ಸಮುದಾಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕುಂಬಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಮಡಿಕೆ ತಯಾರಕರ ಸಹಕಾರ ಸಂಘದ ಅಧ್ಯಕ್ಷ ಎಂ.ಡಿ.ನಾಣಯ್ಯ ತಿಳಿಸಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಕುಂಬಾರ ಅಭಿವೃದ್ಧಿ ನಿಗಮಕ್ಕಾಗಿ ಕುಂಬಾರ ಸಮುದಾಯದ ಮುಖಂಡರು ಹೋರಾಟವನ್ನು ತೀವ್ರಗೊಳಿಸಿದ್ದರು. ಇದಕ್ಕೆ ಮಣಿದ ರಾಜ್ಯ ಸರ್ಕಾರ ನಿಗಮ ಸ್ಥಾಪಿಸುವ ಮೂಲಕ ಕುಂಬಾರರ ಅಭ್ಯುದಯಕ್ಕೆ ಸಹಕಾರ ನೀಡಿದೆ. ಜಿಲ್ಲೆಯಲ್ಲಿರುವ ಸಮುದಾಯದ ಪರವಾಗಿ ಹೋರಾಟಗಾರರು ಹಾಗೂ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.
ನಿಗಮವು ಕುಂಬಾರ, ಚಕ್ರಸಾಲಿ, ಕುಲಾಲ ಸೇರಿದಂತೆ ಇನ್ನಿತರ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಲಿದೆ. ರಾಜ್ಯದಲ್ಲಿ ಕುಂಬಾರ ಸಮುದಾಯ ಸುಮಾರು 28 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ಇದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಹಿಂದುಳಿದ ಹಾಗೂ ಶೋಷಿತ ಸಮುದಾಯವಾಗಿದೆ.
ಕುಂಬಾರ ವೃತ್ತಿಯನ್ನೇ ನಂಬಿಕೊoಡಿರುವ ಈ ಸಮುದಾಯದ ಮಂದಿ ಹೊಟ್ಟೆಪಾಡಿಗಾಗಿ ಊರು ಊರು ಸಂಚರಿಸುತ್ತಾರೆ. ಇದರಿಂದ ಇವರ ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದೆ. ಇದೀಗ ಅಭಿವೃದ್ಧಿ ನಿಗಮ ಸ್ಥಾಪನೆಯಿಂದ ಸಮಸ್ಯೆಗಳು ಪರಿಹಾರವಾಗಿ ಎಲ್ಲಾ ರೀತಿಯಲ್ಲಿ ಬೆಳವಣಿಗೆಯನ್ನು ಕಾಣಲು ಸಾಧ್ಯವಾಗಲಿದೆ ಎಂದು ನಾಣಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*