ಮಡಿಕೇರಿ ಮಾ.28 : ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವ ಸರ್ಕಾರದ ಕ್ರಮ ಸ್ವಾಗತಾರ್ಹ. ಆದರೆ ಬಡವರಿಗೆ ಹೊರೆಯಾಗಿರುವ ದುಬಾರಿ ದಂಡ ವಸೂಲಾತಿಯನ್ನು ತಕ್ಷಣ ನಿಲ್ಲಿಸಬೇಕೆಂದು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಹೊಟ್ಟೆಯಂಡ ಫ್ಯಾನ್ಸಿ ಬೆಳ್ಯಪ್ಪ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪಾನ್, ಆಧಾರ್ ಲಿಂಕ್ ಕುರಿತು ವ್ಯಾಪಕ ಪ್ರಚಾರ ನೀಡದ ಸರ್ಕಾರ ಇದೀಗ ಬಡವರು, ಕೂಲಿ ಕಾರ್ಮಿಕರು, ಆಟೋಚಾಲಕರು, ಅನಕ್ಷರಸ್ಥರು, ಜನಸಾಮಾನ್ಯರಿಗೆ ಹೊರೆಯಾಗಬಲ್ಲ ರೂ.1 ಸಾವಿರ ದಂಡ ವಿಧಿಸುತ್ತಿರುವುದು ಖಂಡನೀಯವೆoದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಪಾನ್, ಆಧಾರ್ ಲಿಂಕ್ ನೆಪದಲ್ಲಿ ಹಣ ಸಂಗ್ರಹಿಸಲಾಗುತ್ತಿದೆ. ಬಡವರು ದಂಡ ಪಾವತಿಗಾಗಿಯೇ ಸಾಲ ಮಾಡುವ ಪರಿಸ್ಥಿತಿ ಎದುರಾಗಿದೆ. ಒಂದು ಬಡ ಕುಟುಂಬದಲ್ಲಿ 5 ರಿಂದ 10 ಮಂದಿ ಇರುತ್ತಾರೆ. ಒಬ್ಬರು ಅಥವಾ ಇಬ್ಬರು ಮಾತ್ರ ದುಡಿಯುತ್ತಿರುತ್ತಾರೆ. ಇವರೆಲ್ಲರೂ ತಲಾ ಒಂದು ಸಾವಿರ ದಂಡ ಪಾವತಿಸಬೇಕೆಂದರೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಇದೀಗ ಸರ್ಕಾರ ಪಾನ್, ಆಧಾರ್ ಲಿಂಕ್ ನ ದಿನಾಂಕವನ್ನು ಜೂ.30 ರವರೆಗೆ ವಿಸ್ತರಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ಈ ಅವಧಿಯಲ್ಲಿ ಯಾವುದೇ ಕಾರಣಕ್ಕೂ ದಂಡ ವಸೂಲಿ ಮಾಡಬಾರದು. ಜು.1 ರ ನಂತರ ದಂಡ ವಿಧಿಸುವುದಾಗಿ ಘೋಷಣೆ ಮಾಡಲಿ ಎಂದು ಒತ್ತಾಯಿಸಿದ್ದಾರೆ.
ಪಾನ್, ಆಧಾರ್ ಲಿಂಕ್ ಕುರಿತು ಮನೆ ಮನೆ ಪ್ರಚಾರ ಕಾರ್ಯವನ್ನು ಅಧಿಕಾರಿಗಳ ಮೂಲಕ ಸರ್ಕಾರ ಮಾಡಬೇಕು. ದಿನಾ ದುಡಿದು ತಿನ್ನುವವರಿಗೆ, ಅನಕ್ಷರಸ್ಥರಿಗೆ ಹಾಗೂ ಕುಗ್ರಾಮಗಳಲ್ಲಿ ವಾಸಿಸುತ್ತಿರುವವರಿಗೆ ಇದರ ಬಗ್ಗೆ ಮಾಹಿತಿಯೇ ಇಲ್ಲದಾಗಿದೆ. ದಂಡ ವಸೂಲಿ ಮಾಡುವ ಮೊದಲು ಸರ್ಕಾರ ಜಾರಿಗೆ ತಂದಿರುವ ಕಾರ್ಯಕ್ರಮದ ಅರಿವು ಎಲ್ಲರಿಗೆ ಆಗಿದೆಯೇ ಎನ್ನುವುದನ್ನು ಮೊದಲು ಮನವರಿಕೆ ಮಾಡಿಕೊಳ್ಳಲಿ. ಡಿಜಿಟಲ್ ಇಂಡಿಯಾ ಪರಿಕಲ್ಪನೆ ಪ್ರಚಾರಕ್ಕೆ ಮಾತ್ರ ಸೀಮಿತವಾದರೆ ಸಾಲದು. ಪಾನ್, ಆಧಾರ್ ಲಿಂಕ್ ಪ್ರಕ್ರಿಯೆ ಸುಲಭವಾಗುವಂತೆ ಜನಸ್ನೇಹಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಫ್ಯಾನ್ಸಿ ಬೆಳ್ಯಪ್ಪ ಆಗ್ರಹಿಸಿದ್ದಾರೆ.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*