ನಾಪೋಕ್ಲು ಮಾ.28 : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಮೂವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ.
ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೈಕಾಡು ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಸ್ಸಾಂ ಮೂಲದ ಸೈಫುಲ್ ಇಸ್ಲಾಂ (27)ಅನಾರ್ ಹುಸೈನ್ (37) ಜಹೀರ್ ಅಲಿ (28) ಎಂಬ ಮೂವರು ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ಸುಮಾರು 2.150ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಾಮರಾಜನ್ ಮತ್ತು ಹೆಚ್ಚುವರಿ ಪೊಲೀಸ್ ಉಪ ಅಧೀಕ್ಷರಾದ ಸುಂದರ್ ರಾಜ್ ನಿರ್ದೇಶನದಂತೆ ಡಿವೈಎಸ್ಪಿ ಜಗದೀಶ್, ವೃತ ನಿರೀಕ್ಷಕ ಶೇಖರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್, ಸಿಬ್ಬಂದಿಗಳಾದ ಕೆ.ಎಂ. ಅಬ್ದುಲ್ ಶಮೀಲ್, ಶಿವಪ್ರಸಾದ್,ಹರ್ಷ, ಪ್ರಸನ್ನ, ಮಧುಸೂದನ್,ಎಚ್. ಸಿ.ಕಾಳೆಯಪ್ಪ, ಪಂಚಲಿಂಗಪ್ಪ ಸತ್ತಿಗೇರಿ, ಮಹದೇವ ನಾಯಕ, ನವೀನ್, ಶರತ್, ಮಹೇಶ್, ರಾಮಕೃಷ್ಣ, ರವಿಕುಮಾರ್, ಗಿರೀಶ್, ವೆಂಕಟೇಶ್, ಲವಕುಮಾರ್,ಚಾಲಕ ಷರೀಫ್ ಪಾಲ್ಗೊಂಡಿದ್ದರು. (ವರದಿ : ಝಕರಿಯ ನಾಪೋಕ್ಲು)