ಮಡಿಕೇರಿ ಮಾ.28 : ಹಿಂದುಳಿದ ವರ್ಗಗಳ ಪ್ರವರ್ಗ 3ಎ ಗೆ ಸೀಮಿತವಾಗಿ ರಚಿಸಲಾಗಿರುವ ‘ಕೊಡವ ಅಭಿವೃದ್ಧಿ ನಿಗಮ’ಕ್ಕೆ ಕನಿಷ್ಠ 250 ಕೋಟಿ ರೂ.ಗಳನ್ನು ಒದಗಿಸುವ ಮೂಲಕ ಕರ್ನಾಟಕ ರಾಜ್ಯ ಸರ್ಕಾರ ಕೊಡವ ಸಮುದಾಯದ ಸರ್ವಾಂಗೀಣ ಪ್ರಗತಿಗೆ ಇಂಬು ನೀಡಬೇಕೆಂದು ಯುನೈಟೆಡ್ ಕೊಡವ ಆರ್ಗನೈಸೇಷನ್ ಟ್ರಸ್ಟ್ ಅಧ್ಯಕ್ಷರಾದ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊಡಗು’ ಕರ್ನಾಟಕದೊಂದಿಗೆ ವಿಲೀನವಾದ ಬಳಿಕ ಕರ್ನಾಟಕ ರಾಜ್ಯ ಸರ್ಕಾರ ಜಿಲ್ಲೆಯ ವಿಶಿಷ್ಟ ಸಂಸ್ಕೃತಿಯ ಕೊಡವ ಸಮುದಾಯಯಕ್ಕೆ ನೀಡಿದ ಮಹತ್ವದ ಕೊಡುಗೆ ಕೊಡವ ಅಭಿವ್ರೃದ್ಧಿ ನಿಗಮವೆಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ನಿಗಮ ಕೊಡವ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪ್ರಗತಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಲು ಹೆಚ್ಚಿನ ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಎಲ್ಲಾ ಗೌರವವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲುತ್ತದೆ. ಇದೀಗ ಚುನಾವಣೆ ಸಮೀಪಿಸುತ್ತಿದ್ದು, ಮುಂದಿನ ಸರ್ಕಾರವನ್ನು ಯಾರು ಬೇಕಾದರು ರಚಿಸಬಹುದು. ಆದರೆ, ಆಡಳಿತಕ್ಕೆ ಬರುವ ಸರ್ಕಾರ ಕೊಡವ ಅಭಿವೃದ್ಧಿ ನಿಗಮಕ್ಕೆ ಅಗತ್ಯ ಅನುದಾನವನ್ನು ಒದಗಿಸುವ ಮೂಲಕ ಕೊಡವ ಸಮುದಾಯದ ಸರ್ವಾಂಗೀಣ ಪ್ರಗತಿಗೆ ಒತ್ತು ನೀಡಬೇಕೆನ್ನುವ ಆಶಯ ವ್ಯಕ್ತಪಡಿಸಿ, ನಿಗಮಕ್ಕೆ ಸಮಿತಿಯನ್ನು ರಚಿಸುವ ಹಂತದಲ್ಲಿ ರಾಜಕೀಯ ರಹಿತವಾಗಿ, ಕೊಡವ ಸಮುದಾಯದ ಅಭಿವೃದ್ಧಿಗೆ ವಿವಿಧ ಆಯಾಮಗಳಲ್ಲಿ ಶ್ರಮಿಸುತ್ತಿರುವವರನ್ನು ಪರಿಗಣಿಸಬೇಕೆಂದು ಮನವಿ ಮಾಡಿದರು.
ಬಹುದೊಡ್ಡ ಗೆಲುವು-ಯುನೈಟೆಡ್ ಕೊಡವ ಆರ್ಗನೈಸೇಷನ್ (ಯುಕೋ) ಸಂಘಟನೆ ಹಲವು ವರ್ಷಗಳಿಂದ ಕೊಡವ ಸಮುದಾಯದ ಅಭಿವೃದ್ಧಿಗೆ ನಿಗಮ ಸ್ಥಾಪನೆಯಾಗಬೇಕೆನ್ನುವ ಬೇಡಿಕೆಯನ್ನು ಸರ್ಕಾರದ ಮುಂದಿಡುತ್ತಾ ಬಂದಿದೆ. 2015 ರಲ್ಲಿ ಬೇಡಿಕೆ ಈಡೇರಿಕೆಗೆ ತಲಕಾವೇರಿಯಿಂದ-ಬೆಂಗಳೂರಿಗೆ ಪಾದಯಾತ್ರೆಯನ್ನು ನಡೆಸಿತ್ತು. ಇದೀಗ ಮುಖ್ಯ ಮಂತ್ರಿಗಳು ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ಹೊರಡಿಸಿರುವುದು ಸಂಘಟನೆಯ ಬಹುದೊಡ್ಡ ಗೆಲುವಾಗಿದೆಯೆಂದು ಸಂತಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಯುಕೋ ಸಂಘಟನೆಯ ಸದಸ್ಯರಾದ ಚೆಪ್ಪುಡಿರ ಸುಜು ಕರುಂಬಯ್ಯ, ಅಪ್ಪಾರಂಡ ವೇಣು ಪೊನ್ನಪ್ಪ ಮತ್ತು ಮಾದೇಟಿರ ತಿಮ್ಮಯ್ಯ ಉಪಸ್ಥಿತರಿದ್ದರು.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*