ಚೆಯ್ಯಂಡಾಣೆ, ಮಾ 29 : ಚೆಯ್ಯಂಡಾಣೆಯ ಸಂಜೀವಿನಿ ಒಕ್ಕೂಟದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು.
ಸ್ಥಳೀಯ ಮಹಿಳಾ ಸಮಾಜದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ಚೇತನ್, ಮಹಿಳೆಯರು ಆಟೋಟಗಳಲ್ಲಿ ಭಾಗವಹಿಸಿಸುವುದು ಮುಖ್ಯ. ಸೋಲು, ಗೆಲುವು ಮುಖ್ಯವಲ್ಲ ಎಂದು ಕಾರ್ಯಕ್ರಮಕ್ಕೆ ಶುಭಾ ಹಾರೈಸಿದರು.
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಮಾತನಾಡಿ, ಮಹಿಳೆಯರು ಸ್ವಾವಲಂಬಿಗಳಾಗಿ ಜೀವಿಸಲು ಸರಕಾರ ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಹಿಳೆಯರು ಇದರ ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದರು.
ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ರತ್ತು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ಬಿ.ಎಸ್.ಪುಷ್ಪ, ಸದಸ್ಯರಾದ ಮಂಜುಳಾ, ಪೆಮ್ಮಂಡ ಕಾವೇರಮ್ಮ, ವಾಣಿ, ಬೀನ ಕುಮಾರಿ, ಮೀನಾಕ್ಷಿ, ಸಂಜೀವಿನಿ ಒಕ್ಕೂಟದ ಸದಸ್ಯರು ಇದ್ದರು. ಎಬಿಕೆ ವಸಂತಿ ಸ್ವಾಗತಿಸಿದರು. ನಳಿಸಿ ಕಳೆದ ಸಾಲಿನ ವರದಿ ವಾಚಿಸಿದರು.
ಆಟೋಟ ಸ್ವರ್ಧೆಯಲ್ಲಿ ವಿಜೇತರಾದವರಿಗೆ ಹಾಗೂ ಕಳೆದ ಸಾಲಿನಲ್ಲಿ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ವರದಿ : ಅಶ್ರಫ್