ಮಡಿಕೇರಿ ಮಾ.29 : ಇಬ್ನಿವಳವಾಡಿ ಗ್ರಾಮದ ಶ್ರೀ ಭದ್ರಕಾಳಿ ದೇವಾಲಯದ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು.
ಮುಂಜಾನೆಯಿಂದಲೇ ದೇವಿಗೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು.
ಮಧ್ಯಾಹ್ನ ಕೊಡಿಯಾಟ್, ಆಂಗೋಲ ಪೋಂಗೊಲ, ಪೀಲಿ ಆಟ್, ಕೊಂಬಾಟ್ ಮತ್ತು ತೆಂಗಿನಕಾಯಿಗೆ ಗುಂಡು ಹೊಡೆಯುವ ಕಾರ್ಯಕ್ರಮ ನಡೆಯಿತು.
ವಿವಿಧ ಗ್ರಾಮಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.









