ಮಡಿಕೇರಿ ಮಾ.29 : ಮುಸಲ್ಮಾನರಿಗಾಗಿ ಮೀಸಲಿದ್ದ 2 ಬಿ ಯಲ್ಲಿನ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿರುವ ಕೊಡಗು ಮುಸ್ಲಿಂ ಅಸೋಸಿಯೇಷನ್ ಒಕ್ಕಲಿಗರು ಮತ್ತು ಲಿಂಗಾಯಿತರಿಗೆ ತಲಾ ಶೇ.10 ಮತ್ತು ಮುಸ್ಲಿಮರಿಗೆ ಶೇ.5ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಒತ್ತಾಯಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಪಿ.ಸಿ.ಹಸೈನಾರ್ ಹಾಜಿ ಮುಖ್ಯಮಂತ್ರಿಗಳು ಮುಸ್ಲಿಂ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.
ಮುಸಲ್ಮಾನರ ಮೀಸಲಾತಿಯನ್ನು ಕಸಿದುಕೊಂಡು ಒಕ್ಕಲಿಗರು ಮತ್ತು ಲಿಂಗಾಯಿತರಿಗೆ ಹಂಚಿಕೆ ಮಾಡುವ ಮೂಲಕ ನಮ್ಮೊಳಗೆ ಕಲಹ ಏರ್ಪಡಲಿ ಎನ್ನುವ ಭ್ರಮೆಯಲ್ಲಿ ಸರ್ಕಾರವಿತ್ತು. ಆದರೆ ನಾವು ಒಕ್ಕಲಿಗರು ಮತ್ತು ಲಿಂಗಾಯಿತರೊಂದಿಗೆ ಜಗಳ ಮಾಡುವುದಿಲ್ಲ, ಬದಲಿಗೆ ಅವರಿಗೆ ತಲಾ ಶೇ.10 ರಷ್ಟು ಮೀಸಲಾತಿ ನೀಡಬೇಕು ಮತ್ತು ಮುಸಲ್ಮಾನರ ಮೀಸಲಾತಿಯನ್ನು ಶೇ.5 ಕ್ಕೆ ಏರಿಕೆ ಮಾಡಬೇಕೆಂದು ಮುಂದೆ ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ ಆಗ್ರಹಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಉಪಾಧ್ಯಕ್ಷ ಪಿ.ಎಂ.ಖಾಸಿಂ ಮಾತನಾಡಿ ಈ ಹಿಂದೆ ಹೆಚ್.ಡಿ.ದೇವೇಗೌಡರು ಘೋಷಿಸಿದ ಶೇ.4ರಷ್ಟು ಮೀಸಲಾತಿಯಿಂದ ಮುಸಲ್ಮಾನರ ಶಿಕ್ಷಣ ಮತ್ತು ಉದ್ಯೋಗಕ್ಕೆ ಸಹಕಾರಿಯಾಗಿತ್ತು. ಆದರೆ ಇಂದು ಮುಖ್ಯಮಂತ್ರಿಗಳು ನಮ್ಮ ತಟ್ಟೆಗೆ ಕೈ ಹಾಕಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಇನ್ನೆಂದಿಗೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಸಲ್ಮಾನರಿಗೆ ಸಿಗಬೇಕಾದ ಮೀಸಲಾತಿಗಾಗಿ ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದ ಅವರು, ದೇಶಕ್ಕೆ ಸತ್ಯವನ್ನು ತಿಳಿಸಿದ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯ ಸ್ಥಾನವನ್ನು ಭಯದಿಂದ ಅನರ್ಹಗೊಳಿಸಲಾಗಿದೆ ಎಂದು ಟೀಕಿಸಿದರು.
ಸಿದ್ದರಾಮಯ್ಯ ಅವರ ವಿರುದ್ಧ ಮಾತನಾಡಿದ ಸಚಿವ ಅಶ್ವತ್ಥ ನಾರಾಯಣ ಅವರ ವಿರುದ್ಧ, ಗೋಣಿಕೊಪ್ಪದಲ್ಲಿ ಆಝಾನ್ ಬಗ್ಗೆ ಅವಹೇಳನ ಮಾಡಿದ ಈಶ್ವರಪ್ಪ ಅವರ ವಿರುದ್ಧ ಮತ್ತು ನಾಪೋಕ್ಲುವಿನಲ್ಲಿ ಮುಸಲ್ಮಾರನ್ನು ಪಾಕಿಸ್ತಾನಿಗಳೆಂದು ನಿಂದಿಸಿದ ಚೈತ್ರ ಎಂಬುವವರ ವಿರುದ್ಧ ಪೊಲೀಸರು ಯಾಕೆ ಕ್ರಮ ಕೈಗೊಳ್ಳಲಿಲ್ಲವೆಂದು ಪ್ರಶ್ನಿಸಿದರು.
ದೇಶದಲ್ಲಿ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗಿದ್ದು, ಮಿನಿ ತುರ್ತು ಪರಿಸ್ಥಿತಿ ಇದೆ ಎಂದು ಖಾಸಿಂ ಆರೋಪಿಸಿದರು.
ಗೌರವಾಧ್ಯಕ್ಷ ಅಬ್ದುಲ್ ರೆಹಮಾನ್ ಮಾತನಾಡಿ ಮುಸಲ್ಮಾನರ ಮೀಸಲಾತಿಯನ್ನು ಕಸಿದುಕೊಳ್ಳುವ ಮೂಲಕ ಕಾನೂನು ಉಲ್ಲಂಘಿಸಲಾಗಿದೆ. ಬಡವರು ಹಾಗೂ ಜನಸಾಮನ್ಯರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಟೀಕಿಸಿದರು.
ಪ್ರಧಾನ ಕಾರ್ಯದರ್ಶಿ ಅಬ್ದುಲ್ ರೆಹಮಾನ್ ನಾಪೋಕ್ಲು ಮಾತನಾಡಿ ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಬಿಜೆಪಿ ಸರ್ಕಾರ ಜನರ ಹಾದಿ ತಪ್ಪಿಸುವುದಕ್ಕಾಗಿ ಮೀಸಲಾತಿಯ ಗೊಂದಲವನ್ನು ಸೃಷ್ಟಿಸಿದೆ ಎಂದು ಆರೋಪಿಸಿದರು.
ರಾಜ್ಯ ಕಾಂಗ್ರೆಸ್ ವಕ್ತಾರ ಟಿ.ಎಂ.ಶಾಹಿದ್ ಮಾತನಾಡಿ ಮೀಸಲಾತಿ ರದ್ದುಪಡಿಸಿರುವ ಹಿಂದೆ ರಾಜಕೀಯ ಷಡ್ಯಂತ್ರವಿರುವುದು ಸ್ಪಷ್ಟವಾಗುತ್ತಿದೆ. ಸರ್ಕಾರದ ಸಂವಿಧಾನ ವಿರೋಧಿ ನೀತಿ ವಿರುದ್ಧ ಬೃಹತ್ ಹೋರಾಟವನ್ನು ರೂಪಿಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*