ಕುಶಾಲನಗರ ಮಾ.29 : ನಿರಂತರ ಕಾರ್ಯಕ್ರಮ ಚಟುವಟಿಕೆಗಳ ಮೂಲಕ ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸಲು ಸಾಧ್ಯ ಎಂದು ಕುಶಾಲನಗರದ ಪ್ರಿಯಾಂಕ ಗಂಗಾಧರಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕುಶಾಲನಗರದ ಕಣಿವೆ ಶ್ರೀ ರಾಮಲಿಂಗೇಶ್ವರ ರಥೋತ್ಸವ ಪ್ರಯುಕ್ತ ಕರ್ನಾಟಕ ಜಾನಪದ ಪರಿಷತ್ತು ಮತ್ತು ದೇವಾಲಯ ಸಮಿತಿ ವತಿಯಿಂದ ನಡೆದ ಹಳ್ಳಿಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆಯ ಮೂಲಕ ಪರಸ್ಪರ ಉತ್ತಮ ಬಾಂಧವ್ಯ ವೃದ್ಧಿಯಾಗಲು ಸಾಧ್ಯ ಎಂದು ಅವರು ಹೇಳಿದರು.
ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಾನಪದ ಪರಿಷತ್ ಜಿಲ್ಲಾ ಖಜಾಂಚಿ ಸಂಪತ್ ಕುಮಾರ್ ಸರಳಾಯ ಅವರು ಮಾತನಾಡಿ, ಕಲೆಗಳ ಬಗ್ಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಿಗೆ ಅರಿವು ಜಾನಪದ ಸಂಸ್ಕೃತಿ ಬಗ್ಗೆ ಮೂಡಿಸಲಾಗುತ್ತಿದೆ ಎಂದರು. ಜನಪದೀಯ ಪ್ರತಿಭೆಗಳನ್ನು ಹುಡುಕಿ ಗೌರವಿಸುವ ಕೆಲಸ ಪರಿಷತ್ತು ಮೂಲಕ ನಡೆಯುತ್ತಿದೆ ಎಂದರು. ಕಣಿವೆ ಶ್ರೀ ರಾಮಲಿಂಗೇಶ್ವರ
ದೇವಾಲಯ ಸಮಿತಿ ಅಧ್ಯಕ್ಷರಾದ ಕೆ.ಎನ್.ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಭಾರದ್ವಾಜ ಕೆ.ಆನಂದತೀರ್ಥ, ಪರಿಷತ್ ಮಡಿಕೇರಿ ತಾಲೂಕು ಘಟಕದ ಅಧ್ಯಕ್ಷರಾದ ಹೆಚ್.ಟಿ.ಅನಿಲ್, ಕುಶಾಲನಗರ ತಾಲೂಕು ಘಟಕ ಅಧ್ಯಕ್ಷರಾದ ಎಂ.ಎನ್.ಚಂದ್ರಮೋಹನ್, ಗೌರವಾಧ್ಯಕ್ಷರಾದ ಫ್ಯಾನ್ಸಿ ಮುತ್ತಣ್ಣ, ಕಾರ್ಯಕ್ರಮ ಸಂಯೋಜಕರಾದ ವನಿತಾ ಚಂದ್ರಮೋಹನ್, ಕಣಿವೆ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಕರುಂಬಯ್ಯ ಉಪಸ್ಥಿತರಿದ್ದು ಮಾತನಾಡಿದರು.
ಪರಿಷತ್ತು ಪ್ರಮುಖರಾದ ಕೊಡಗನ ಹರ್ಷ ಅವರು ಸ್ವಾಗತಿಸಿ ವಂದಿಸಿದರು.
ಈ ಸಂದರ್ಭ ನಡೆದ ಹಳ್ಳಿ ಆಟಗಳಲ್ಲಿ ಗ್ರಾಮೀಣ ಕ್ರೀಡೆಗಳಾದ ಕುಂಟೆಬಿಲ್ಲೆ, ಗೋಣಿಚೀಲ ಕಟ್ಟಿ ಓಟ, ಕಣ್ಣು ಮುಚ್ಚಾಲೆ, ಎರಡು ಬಿಂದಿಗೆ ಹೊತ್ತು ಓಡುವ ಸ್ಪರ್ಧೆ, ತೆಂಗಿನಕಾಯಿ ಒಡೆಯುವುದು, ಬುಗರಿ ಆಟ, ಸೈಕಲ್ ಟೈರ್ ಆಟ, ಕೆರೆ- ದಡ ಆಟ, ಸೂಜಿಗೆ ದಾರ ಪೋಣಿಸುತ್ತ ಓಡುವುದು, ಮ್ಯೂಸಿಕಲ್ ಚೇರ್, ಮಡಿಕೆ ಒಡೆಯುವುದು, ಕಪ್ಪೆ ಓಟ ಮುಂತಾದ ಸ್ಪರ್ಧೆಗಳು ನಡೆದವು.
ಸ್ಥಳೀಯ ಸರಕಾರಿ ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಸಾರ್ವಜನಿಕರು, ಪರಿಷತ್ ಸದಸ್ಯರು ಕ್ರೀಡಾ ಸಂಭ್ರಮದಲ್ಲಿ ಪಾಲ್ಗೊಂಡರು.
ಮುಖ್ಯೋಪಾಧ್ಯಾಯರಾದ ಕರುಂಭಯ್ಯ, ಕೊಡಗನ ಹರ್ಷ, ಬಿ.ಎಸ್.ಪರಮೇಶ್, ಫ್ಯಾನ್ಸಿ ಮುತ್ತಣ್ಣ, ಕಾರ್ಯಕ್ರಮ ಆಯೋಜಕರಾದ ವನಿತಾ ಚಂದ್ರಮೋಹನ್ ಬೆಳಗ್ಗಿನಿಂದ ಸಂಜೆ ತನಕ ಗ್ರಾಮೀಣ ಕ್ರೀಡಾಕೂಟದ ಸ್ಪರ್ಧೆಗಳನ್ನು ನಡೆಸಿಕೊಟ್ಟರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*