ಮಡಿಕೇರಿ ಮಾ.30 : ಕೊಡಗು ಜಿಲ್ಲೆಯಲ್ಲಿ ಮಾರ್ಚ್, 31 ರಿಂದ ಏಪ್ರಿಲ್, 15 ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರ ಸೇರಿದಂತೆ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶ ಹೊರಡಿಸಿದ್ದಾರೆ.
ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳ ವಿವರ:- ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲ್ಲರ ಪ್ರೌಢ ಶಾಲೆ, ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆ, ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜು, ಮೂರ್ನಾಡು, ಸಿದ್ದಾಪುರ, ಸಂಪಾಜೆ ಪ್ರೌಢಶಾಲೆ, ಸಂತ ಜೋಸೆಫರ ಪ್ರೌಢ ಶಾಲೆ, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಓ.ಎಲ್.ವಿ. ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಕುಶಾಲನಗರ ಫಾತಿಮಾ ಕಾನ್ವೆಂಟ್ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಪದವಿ ಪೂರ್ವ ಕಾಲೇಜು ಮತ್ತು ಸೆಕ್ರೆಡ್ ಹಾರ್ಟ್ ಪ್ರೌಢಶಾಲೆ, ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸಂತ ಮೇರೀಸ್ ಪ್ರೌಢ ಶಾಲೆ, ಹೆಬ್ಬಾಲೆ ಮತ್ತು ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು, ನೆಲ್ಲಿಹುದಿಕೇರಿ ಸರ್ಕಾರಿ ಪ್ರೌಢ ಶಾಲೆ, ಕೂಡಿಗೆ ಅಂಜೆಲಾ ವಿದ್ಯಾನಿಕೇತನ, ಬಳಗುಂದ ಸಂತ ಜೋಸೇಫರ ಪ್ರೌಢ ಶಾಲೆ, ಆಲೂರು ಸಿದ್ದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ), ಮಾದಾಪುರ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜು, ವಿರಾಜಪೇಟೆ ಸ.ಪ.ಪೂ.ಕಾಲೇಜು ಮತ್ತು ಸಂತ ಅನ್ನಮ್ಮ ಪ್ರೌಢ ಶಾಲೆ, ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ, ಗೋಣಿಕೊಪ್ಪ ಸರ್ಕಾರಿ ಪ್ರೌಢ ಶಾಲೆ, ಶ್ರೀಮಂಗಲ ಪದವಿ ಪೂರ್ವ ಕಾಲೇಜು, ಪಾಲಿಬೆಟ್ಟ ಮತ್ತು ತಿತಿಮತಿ ಸರ್ಕಾರಿ ಪ್ರೌಢ ಶಾಲೆ ಹಾಗೂ ಗೋಣಿಕೊಪ್ಪಲು ಪ್ರೌಢ ಶಾಲೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಕಾರ್ಯಗಳನ್ನು ನಡೆಸತಕ್ಕದ್ದಲ್ಲ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.
ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ. ಈ ಆದೇಶವು ಪರೀಕ್ಷೆ ಆರಂಭದ ಒಂದು ಗಂಟೆ ಮುಂಚಿತ ಅವಧಿಯಿಂದ ಪರೀಕ್ಷೆ ಮುಕ್ತಾಯದ ಒಂದು ಗಂಟೆ ನಂತರದವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*