ಮಡಿಕೇರಿ ಮಾ.30 : ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಮಾರ್ಚ್ 31 ರಿಂದ ಆರಂಭವಾಗಲಿದ್ದು, ಜಿಲ್ಲೆಯಲ್ಲಿ 170 ಶಾಲೆಗಳ 6,587 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ತಿಳಿಸಿದ್ದಾರೆ.
ಮಡಿಕೇರಿ ತಾಲ್ಲೂಕಿನ 43 ಶಾಲೆಗಳ 1,886, ಸೋಮವಾರಪೇಟೆ ತಾಲ್ಲೂಕಿನ 70 ಶಾಲೆಗಳ 2,611 ವಿದ್ಯಾರ್ಥಿಗಳು, ವಿರಾಜಪೇಟೆ ತಾಲ್ಲೂಕಿನ 57 ಶಾಲೆಯ 2,090 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
2022-23 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 10 ನೇ ತರಗತಿ ಪರೀಕ್ಷೆಗೆ ತಾಲ್ಲೂಕುವಾರು ನೋಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳ ವಿವರ ಇಂತಿದೆ.
ಮಡಿಕೇರಿ ತಾಲ್ಲೂಕಿನ 43 ಶಾಲೆಗಳ 1886 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ 922 ಹುಡುಗಿಯರು, 897 ಹುಡುಗರು, ಖಾಸಗಿಯಾಗಿ ಒಟ್ಟು 67 ವಿದ್ಯಾರ್ಥಿಗಳು, ಅದರಲ್ಲಿ 46 ಹುಡುಗಿಯರು, 21 ಹುಡುಗರು ಪರೀಕ್ಷೆ ಬರೆಯಲಿದ್ದಾರೆ.
ಸೋಮವಾರಪೇಟೆ ತಾಲ್ಲೂಕಿನ 70 ಶಾಲೆಗಳ 2611 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ 1311 ಹುಡುಗಿಯರು, 1157 ಹುಡುಗರು, ಖಾಸಗಿಯಾಗಿ ಒಟ್ಟು 143 ವಿದ್ಯಾರ್ಥಿಗಳು, ಅದರಲ್ಲಿ 86 ಹುಡುಗಿಯರು, 57 ಹುಡುಗರು ಪರೀಕ್ಷೆ ಬರೆಯಲಿದ್ದಾರೆ.
ವಿರಾಜಪೇಟೆ ತಾಲ್ಲೂಕಿನ 57 ಶಾಲೆಗಳ 2090 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ 1040 ಹುಡುಗಿಯರು, 976 ಹುಡುಗರು, ಖಾಸಗಿಯಾಗಿ ಒಟ್ಟು 74 ವಿದ್ಯಾರ್ಥಿಗಳು, ಅದರಲ್ಲಿ 37 ಹುಡುಗಿಯರು, 37 ಹುಡುಗರು ಪರೀಕ್ಷೆ ಬರೆಯಲಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುವ ದಿನಗಳಂದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ತಲುಪಲು ಅನುಕೂಲವಾಗುವಂತೆ ಸಾಕಷ್ಟು ಬಸ್ ಸೌಲಭ್ಯ ಒದಗಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರಗಳನ್ನು ತೋರಿಸಿ ನಿಗಮದ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ನಿಗಮದ ಅಧಿಕಾರಿ ಅವರು ತಿಳಿಸಿದ್ದಾರೆ.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್-19 ಸಂಬಂಧ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ತುರ್ತು ಆರೋಗ್ಯ ಸೇವೆಯನ್ನು ಒದಗಿಸಲು ಅಗತ್ಯ ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸಿಕೊಡುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಅವರಲ್ಲಿ ಕೋರಲಾಗಿದೆ.
ಪರೀಕ್ಷೆಗೆ ವಿದ್ಯಾರ್ಥಿಗಳು ಸಿದ್ದತೆ ಮಾಡಿಕೊಳ್ಳುತ್ತಿದ್ದು, ಅವರಿಗೆ ಅಡಚಣೆಯಾಗದಂತೆ ವಿದ್ಯುತ್ ಸೌಲಭ್ಯವನ್ನು ನಿರಂತರವಾಗಿ ಒದಗಿಸಲು ವಿದ್ಯುಚ್ಛಕ್ತಿ ನಿಗಮದ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಲು ಅಗತ್ಯ ಕ್ರಮವಹಿಸಲಾಗಿದೆ. ಆಯಾಯ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಹಾಗೂ ಕಸ್ಟೋಡಿಯನ್ ಅವರು ನಿಯಮಾನುಸಾರ ಸಿದ್ಧತೆ ನಿರ್ವಹಿಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಿರ್ವಹಿಸಲು ಮಾರ್ಗದರ್ಶನ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಮುಕ್ತವಾಗಿ ಪರೀಕ್ಷೆ ಬರೆಯಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*