ಮಡಿಕೇರಿ ಮಾ.30 : ವಿಧಾನಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಜಿಲ್ಲೆಯಲ್ಲಿನ ಹೋಂ ಸ್ಟೇ, ರೆಸಾರ್ಟ್‍ಗಳಲ್ಲಿ ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸುವ ನಿಟ್ಟಿನಲ್ಲಿ ಅನುಸರಿಸರಿಸಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಬೇಕು ಎಂದರು.
ಮತದಾನದ 48 ಗಂಟೆ ಮುಂಚಿತವಾಗಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅವರು ಹಲವು ಸಲಹೆ ನೀಡಿದರು. ನಿಶ್ಚಿತಾರ್ಥ, ಮದುವೆ, ನಾಮಕರಣ ಮತ್ತಿತರ ಖಾಸಗಿ ಸಮಾರಂಭಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಆದರೆ ರಾಜಕೀಯ ಪ್ರೇರಿತವಾಗಿರಬಾರದು. ಯಾವುದೇ ಪಕ್ಷದ ಪ್ರಚಾರಕ್ಕೆ ವೇದಿಕೆಯಾಗಬಾರದು ಎಂದರು.
ಹೋಟೆಲ್ ಅಸೋಷಿಯೇಷನ್ ಅಧ್ಯಕ್ಷರಾದ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸಲಾಗುವುದು ಎಂದು ತಿಳಿಸಿದರು.
ಉಪಾಧ್ಯಕ್ಷರಾದ ಜಾಹೀರ್ ಅಹಮ್ಮದ್, ಕಾರ್ಯದರ್ಶಿ ನಾಜೀರ್ ಅಹಮ್ಮದ್, ಖಜಾಂಜಿ ಕೆ.ಕೆ.ಭಾಸ್ಕರ್, ಹೋಂ ಸ್ಟೇ ಅಸೋಷಿಯೇಷನ್ ಕಾರ್ಯದರ್ಶಿ ಮೋಂತಿ ಗಣೇಶ್, ನಿರ್ದೇಶಕರಾದ ಅಂಬೆಕಲ್ ನವೀನ್ ಅವರು ಹಲವು ವಿಚಾರಗಳ ಕುರಿತು ಪ್ರಸ್ತಾಪಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬಾನಾ ಎಂ.ಶೇಖ್, ಇತರರು ಇದ್ದರು.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*