ಮಡಿಕೇರಿ ಮಾ.30 : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತಿದ್ದ ಮೂವರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಕುಶಾಲನಗರ ನಿವಾಸಿ ಅಕ್ಟರ್.ಹೆಚ್ (29) ಕೇರಳ ಮೂಲದವರಾದ ಮಹಮ್ಮದ್ ರಾಫಿ (28) ಹಾಗೂ ರಿಷಿಕುಮಾರ್.ಟಿ.ಕೆ (34) ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳ ಬಳಿಯಿಂದ 13 ಗ್ರಾಂ ಗಾಂಜಾ ಹಾಗೂ 41 ಗ್ರಾಂ MDMA ನಿಷೇಧಿತ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೂಡಿಗೆ ಸೇತುವೆ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ತನಿಖಾ ತಂಡ ದಾಳಿ ನಡೆಸಿತು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಂದರ್ ರಾಜ್.ಕೆ.ಎಸ್, ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಗಂಗಾಧರಪ್ಪ.ಆರ್.ವಿ, ಕುಶಾಲನಗರ ವೃತ್ತದ ಸಿಪಿಐ ಮಹೇಶ್.ಬಿ.ಜಿ, ಪಿಎಸ್‌ಐ ಪುನೀತ್.ಡಿ.ಎಸ್, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ದಿನೇಶ್ ಕುಮಾರ್.ಎಂ, ಹಾಗೂ ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು. ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಶ್ಲಾಘಿಸಿದ್ದಾರೆ.
::: ಮಾಹಿತಿ ನೀಡಿ :::
ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬAದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಹಾಗೂ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತ್ತೇವೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಎಸ್‌ಪಿ ಮನವಿ ಮಾಡಿದ್ದಾರೆ.








