ಸೋಮವಾರಪೇಟೆ ಮಾ.30 : ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಮದ್ಯವ್ಯಸನಿ ಪುಂಡರ ಹಾವಳಿ ಮಿತಿಮೀರಿದ್ದು, ಪೊಲೀಸರು ತಕ್ಷಣ ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಜೂನಿಯರ್ ಕಾಲೇಜು ಆವರಣದಲ್ಲಿ ಸಿಂಥೆಟಿಕ್ ಟರ್ಫ್ ಮೈದಾನ, ಪ್ರಾಥಮಿಕ ಶಾಲಾ ಮೈದಾನ, ವಿಶಾಲವಾದ ಕಾಲೇಜು ಇದೆ. ರಾತ್ರಿಯಾಗುತ್ತಿದ್ದಂತೆ ಈ ಪ್ರದೇಶ ಪುಂಡರ ಗಾಂಜಾ ಮತ್ತು ಮದ್ಯ ವ್ಯಸನದÀ ಆವಾಸ ಸ್ಥಾನವಾಗುತ್ತಿದೆ, ಯಾವುದಕ್ಕೂ ಭದ್ರತೆ ಇಲ್ಲದಾಗಿದೆ.
ಜೂನಿಯರ್ ಕಾಲೇಜು ಸುತ್ತಮುತ್ತ ಗಾಂಜಾ ವ್ಯಸನಿಗಳ ಹಾವಳಿ ಜಾಸ್ತಿಯಾಗಿದೆ. ಮುಗ್ಧ ಯುವಕರು ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ ಕೂಡಲೇ ಪೊಲೀಸರು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಈ ಹಿಂದೆ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರು ಆಗ್ರಹಿಸಿದ್ದರು.
ಆ ವ್ಯಾಪ್ತಿಯ ವಾರ್ಡ್ ಸದಸ್ಯೆ ಶೀಲಾ ಡಿಸೋಜ ಅವರು ಕೂಡ, ಗಾಂಜಾ ಮಾರಾಟದ ಬಗ್ಗೆ ಪೊಲೀಸರ ಗಮನಕ್ಕೆ ತಂದಿದ್ದರು. ಪ್ರಾರಂಭದಲ್ಲಿ ಪೊಲೀಸರ ರೌಂಡ್ಸ್ ಇರುತ್ತಿತ್ತು. ಈಗ ಪುಂಡರು ರಾತ್ರಿ ಕಾಲೇಜು ಆವರಣದಲ್ಲೇ ಮದ್ಯ ಸೇವನೆ ಮಾಡಿ, ಬಾಟಲ್‌ಗಳನ್ನು ಅಲ್ಲಿಯೇ ಎಸೆದು ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆೆ.
ಮಾ.31 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಈ ಕೇಂದ್ರದಲ್ಲಿ ನಡೆಯುತ್ತವೆ. ಬುಧವಾರ ರಾತ್ರಿ ತರಗತಿಯ ಬಾಗಿಲುಗಳಲ್ಲಿ ಖಾಲಿ ಬಾಟಲ್‌ಗಳನ್ನು ಇಟ್ಟು ಹೋಗಿದ್ದಾರೆ. ಮದ್ಯದ ಅಮಲಿನಲ್ಲಿ ಧ್ಜಜಸ್ತಂಭದ ಆವರಣದಲ್ಲೂ ಬಿಯರ್ ಬಾಟಲ್‌ಗಳನ್ನು ಇಟ್ಟು ತಮ್ಮ ವಿಕೃತಿಯನ್ನು ತೋರ್ಪಡಿಸಿದ್ದಾರೆ. ಪೊಲೀಸರು ಇಂತಹ ಪುಂಡರನ್ನು ಹಿಡಿದು ಬುದ್ದಿಕಲಿಸಬೇಕು ಎಂದು ನಿವೃತ್ತ ಉಪನ್ಯಾಸಕ ಸರ್ವಜ್ಞ ಮೂರ್ತಿ ಅವರು ಒತ್ತಾಯಿಸಿದ್ದಾರೆ.
ಪದವಿ ಪೂರ್ವ ಕಾಲೇಜು ಆವರಣದಲ್ಲಿ ರಾತ್ರಿ ಸಮಯದಲ್ಲಿ ಪುಂಡರ ಹಾವಳಿ ಬಗ್ಗೆ ಸಾರ್ವಜನಿಕರು ದೂರಿಕೊಂಡಿದ್ದಾರೆ. ಪ್ರತಿದಿನ ರಾತ್ರಿ ಪೊಲೀಸ್ ಬೀಟ್ ಹಾಕುತ್ತೇನೆ. ಕಾಲೇಜು ಆವರಣದಲ್ಲಿ ಕಾನೂನುಬಾಹಿರ ಚಟುವಟಿಕೆಯಲ್ಲಿ ಪಾಲ್ಗೊಂಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗದುಕೊಳ್ಳಲಾಗುವುದು ಎಂದು ಸೋಮವಾರಪೇಟೆ ಠಾಣಾಧಿಕಾರಿ ರಾಮಚಂದ್ರನಾಯಕ್ ಭರವಸೆ ನೀಡಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*