ಸುಂಟಿಕೊಪ್ಪ, ಮಾ.30: ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಕೋದಂಡ ರಾಮ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ರಾಮನವಮಿಯನ್ನು ಆಚರಿಸಲಾಯಿತು.
ಕೊದಂಡ ರಾಮ ಮಂದಿರದಲ್ಲಿ ಬೆಳಿಗ್ಗೆ ರಾಮ, ಸೀತೆ, ಲಕ್ಷ್ಮಣ, ಆಂಜನೇಯ ಸ್ವಾಮಿಗೆ ಬೆಳ್ಳಿಯ ಕವಚವನ್ನು ಅಳವಡಿಸಿ ವಿವಿಧ ರೀತಿಯ ಹೂವುಗಳಿಂದ ಅಲಂಕರಿಸಿ ಪೂಜಾ ಕೈಂಕಾರ್ಯವನ್ನು ದೇವಾಲಯದ ಮುಖ್ಯ ಅರ್ಚಕ ದರ್ಶನ್ ಭಾರಿತ್ತಾಯ ಅವರ ನೇತೃತ್ವದಲ್ಲಿ ನೆರವೇರಿಸಿದರು.
ನಂತರ ರಾಮನಿಗೆ ಪಂಚಾಮೃತ ಅಭಿಷೇಕ, ರಾಮತಾರಕ ಹೋಮ ನಡೆದು ಮದ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿತರಿಸಲಾಯಿತು.
ನಂತರ ನೆರೆದಿದ್ದ ಭಕ್ತರಿಗೆ ಪಾನಕ, ಕೋಸಂಬರಿ, ಪಾಯಸ ವಿತರಿಸಲಾಯಿತು.
ದಿನದ ಪೂಜಾ ವಿಧಿ ವಿಧಾನಗಳನ್ನು ಅರ್ಚಕರುಗಳಾದ ಹರಿಪ್ರಸಾದ್ ಕೆದ್ಲಾಯ, ಗಣೇಶ್ ಉಪಾಧ್ಯಯ, ಮಂಜುನಾಥ್ ಭಟ್, ಮನೋಜ್ ಭಟ್, ನಿಖಿಲ್ ಭಟ್ ನೆರವೇರಿಸಿದರು.
ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ರಮೇಶ್ ಪಿಳ್ಳೆ, ಉಪಾಧ್ಯಕ್ಷ ಈಶ್ವರ, ಗೌರಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಘ್ನೇಶ್, ಪ್ರಧಾನ ಕಾರ್ಯದರ್ಶಿ ವಾಸುದೇವ್, ಗೌರಿ ಗಣೇಶೋತ್ಸವ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಬಿ.ಎಂ.ಸುರೇಶ್, ನಿಕಟಪೂರ್ವ ಕಾರ್ಯದರ್ಶಿ ಸುರೇಶ್ ಗೋಪಿ, ಮುಖಂಡರಾದ ಪಿ.ಆರ್.ಸುನಿಲ್‍ಕುಮಾರ್, ಧನುಕಾವೇರಪ್ಪ, ಶಾಂತರಾಮ್ ಕಾಮತ್, ಅಶೋಕ್ ಶೇಟ್ ಸೇರಿದಂತೆ ಇತರರು ಇದ್ದರು.