ಮಡಿಕೇರಿ ಮಾ.31 : ಮಡಿಕೇರಿ ಕೊಡವ ಸಮಾಜದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 117ನೇ ಜನ್ಮದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಏರ್‌ಮಾರ್ಷಲ್ ನಂದಾ ಕಾರ್ಯಪ್ಪ ಅವರು ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪುತ್ಥಳಿ ಅನಾವರಣಗೊಳಿಸಿದರು. ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭ ಪದ್ಮಶ್ರೀ ಪ್ರಶಸ್ತಿ ವಿಜೇತೆ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪ್ರಮುಖರಾದ ಕನ್ನಂಡ ಕವಿತಾ ಬೊಳ್ಳಪ್ಪ, ಪ್ರಾಂಶುಪಾಲರಾದ ಬಿ.ಎಂ.ಸರಸ್ವತಿ, ಆಡಳಿತ ಮಂಡಳಿ ಸದಸ್ಯರು, ಕೊಡವ ಸಮಾಜದ ನಿರ್ದೇಶಕರು, ಶಿಕ್ಷಕವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು.