ಮಡಿಕೇರಿ,ಮಾ.31 : ವಾಂಡರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ. ಶಂಕರ್ ಸ್ವಾಮಿ ಅವರ ಸ್ಮರಣಾರ್ಥ ಏರ್ಪಡಿಸಿಕೊಂಡು ಬರಲಾಗುತ್ತಿರುವ 29ನೇ ಮಕ್ಕಳ ಬೇಸಿಗೆ ಕ್ರೀಡಾಶಿಬಿರದ ಉದ್ಘಾಟನೆ ಏ.1 ರಂದು ನಡೆಯಲಿದೆ.
ಜ.ತಿಮ್ಮಯ್ಯ ಕ್ರೀಡಾಂಗಣದಲ್ಲಿ ಬೆಳಿಗ್ಗೆ 8 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಮಾಸ್ಟರ್ ಅಥ್ಲೆಟ್ ಮಾರಮಾಡ ಮಾಚಮ್ಮ ಉದ್ಘಾಟನೆ ಮಾಡುವರು. ವಾಂಡರ‍್ಸ್ ಅಧ್ಯಕ್ಷ ಕೋಟೇರ ಮುದ್ದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ, ರಾಷ್ಟ್ರೀಯ, ಅಂತರರಾಷ್ಟ್ರೀಯ ಹಿರಿಯ ಆಟಗಾರರು, ವಾಂಡರ‍್ಸ್ನ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.










