Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
  • *ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಜನ್ಮ ದಿನಾಚರಣೆ : ಗೌರವ ನಮನ ಸಲ್ಲಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಜನ್ಮ ದಿನಾಚರಣೆ : ಗೌರವ ನಮನ ಸಲ್ಲಿಕೆ*

ಮಾರ್ಚ್ 31, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.31 : ವೀರ ಸೇನಾನಿ, ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 117ನೇ ಹುಟ್ಟು ಹಬ್ಬವನ್ನು ಜಿಲ್ಲಾಡಳಿತ ವತಿಯಿಂದ ಸರಳವಾಗಿ ಆಚರಿಸಲಾಯಿತು.
ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ನಡೆದ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೋರಂನ ಸಂಚಾಲಕರಾದ ಮೇಜರ್(ನಿವೃತ್ತ) ಬಿದ್ದಂಡ ನಂಜಪ್ಪ, ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ತು ಅಧ್ಯಕ್ಷರಾದ ಅನಿಲ್ ಎಚ್.ಟಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ಗೌಡಂಡ ಸುಬೇದಾರ್ ತಿಮ್ಮಯ್ಯ, ಇತರರು ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಬಳಿಕ ಮಾತನಾಡಿದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೋರಂನ ಸಂಚಾಲಕ ಬಿದ್ದಂಡ ನಂಜಪ್ಪ ಅಮರ ಸೇನಾನಿ ಜನರಲ್ ತಿಮ್ಮಯ್ಯ ಅವರು ಹುಟ್ಟಿದ ಮನೆ ಸನ್ನಿಸೈಡ್ ‘ದೇವರ ಮನೆ’ ಇದ್ದಂತೆ, ದೇವಸ್ಥಾನವೆಂದು ಭಾವಿಸುತ್ತೇವೆ ಎಂದು ನುಡಿದರು.
ಜನರಲ್ ತಿಮ್ಮಯ್ಯ ಅವರು ಭಾರತೀಯ ಸೇನೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಭಾರತೀಯ ಸೇನೆಯನ್ನು ಬಲಿಷ್ಠಗೊಳಿಸುವಲ್ಲಿ ಶ್ರಮಿಸಿದ್ದರು ಎಂದು ಅವರು ಸ್ಮರಿಸಿದರು.
ಜನರಲ್ ತಿಮ್ಮಯ್ಯ ಅವರ ಗೌರವರಾರ್ಥ ಸೈಪ್ರಸ್ ದೇಶವು ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ. ಹಾಗೆಯೇ ಇತ್ತೀಚೆಗೆ ಕೊಲ್ಕತ್ತದಲ್ಲೂ ಸಹ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿರುವುದು ವಿಶೇಷವಾಗಿದೆ ಎಂದು ಅವರು ಸ್ಮರಿಸಿದರು.
ಜನರಲ್ ತಿಮ್ಮಯ್ಯ ಸ್ಮಾರಕ ಭವನವನ್ನು ‘ಜೈಸಲ್ಮೇರ್‌ನ ರಕ್ಷಣಾ ಸಂಗ್ರಹಾಲಯ’ ಮಾದರಿಯಲ್ಲಿ ಅಭಿವೃದ್ಧಿ ಪಡಿಸಬೇಕಿದೆ ಎಂದು ಬಿದ್ದಂಡ ನಂಜಪ್ಪ ಅವರು ಕೋರಿದರು.
ಜನರಲ್ ತಿಮ್ಮಯ್ಯ ಅವರಂತಹ ಸೇನಾನಿ ಕಾಣುವುದು ಅಪರೂಪ. ಜನರಲ್ ತಿಮ್ಮಯ್ಯ ಅವರ ಬದುಕೇ ಒಂದು ರೀತಿ ಸೇನೆಯಾಗಿತ್ತು ಎಂದರು.
ಸನ್ನಿಸೈಡ್ ಎಂಬ ಮಡಿಕೇರಿಯಲ್ಲಿನ ಮನೆ ತಿಮ್ಮಯ್ಯ ಅವರ ಇತಿಹಾಸ ಮಾತ್ರವಲ್ಲ, ಭಾರತೀಯ ಸೇನೆಯ ಇತಿಹಾಸವನ್ನು ತಿಮ್ಮಯ್ಯ ಮೂಲಕ ತೆರೆದಿಡುವ ಮನೆಯಾಗಿದೆ. ಸನ್ನಿಸೈಡ್‍ನ ಪ್ರತೀ ಕೋಣೆಯೂ ಸೈನಿಕನ ಕಥೆ ಹೇಳುವಂತಿದೆ ಎಂದರು.
ತಿಮ್ಮಯ್ಯ ಹುಟ್ಟಿದ ಮನೆಯಾದ ಸನ್ನಿಸೈಡ್‍ನ್ನು ಅಪೂರ್ವ ವಸ್ತುಸಂಗ್ರಹಾಲಯ ಆಗಿಸಬೇಕೆಂಬ ಬಯಕೆ, ಬೇಡಿಕೆ ಅನೇಕ ದಶಕಗಳಿಂದ ಇತ್ತು. ಅದು 2021 ರ ಫೆಬ್ರವರಿ, 6 ರಂದು ಭಾರತದ ರಾಷ್ಟ್ರಪತಿ ಶ್ರೀ ರಾಮನಾಥ ಕೋವಿಂದ್ ಮ್ಯೂಸಿಯಂನ್ನು ಲೋಕಾರ್ಪಣೆ ಮಾಡುವ ಮೂಲಕ ಈಡೇರಿತು ಎಂದರು.
ವಿದ್ಯಾರ್ಥಿನಿ ಶ್ರೀಶಾ ಮಾತನಾಡಿ ಸ್ವಾತಂತ್ರ್ಯ ಭಾರತದ ಸೇನಾ ದಂಡನಾಯಕರಾಗಿ ಸೈನಿಕರ ನೆಚ್ಚಿನ ಸೇನಾನಿಯಾಗಿದ್ದರು ಎಂದರು.
ಜನರಲ್ ಕೆ.ಎಸ್.ತಿಮ್ಮಯ್ಯ ಅವರು 1906 ರ ಮಾರ್ಚ್, 31 ರಂದು ಕೊಡಂದೇರ ಕುಟುಂಬದ ತಿಮ್ಮಯ್ಯ ಮತ್ತು ಸೀತಮ್ಮ ದಂಪತಿಗೆ ಜನಿಸಿದರು. ಜನರಲ್ ತಿಮ್ಮಯ್ಯ ಅವರ ಮೂಲ ಹೆಸರು ಸುಬ್ಬಯ್ಯ ಆಗಿದೆ ಎಂದರು.
ಬೆಂಗಳೂರಿನ ಬಿಷಪ್ ಕಾಟನ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ತಿಮ್ಮಯ್ಯ ಅವರು ಕ್ರೀಡಾಕೂಟದಲ್ಲಿ ಕ್ರಿಯಾಶೀಲರಾಗಿದ್ದರು ಎಂದರು.
ಸೈನಿಕರ ನಾಡು ಎಂಬ ಕೀರ್ತಿ ಹೊಂದಿರುವ ಕೊಡಗಿನ ನೆಲದಲ್ಲಿ ತಿಮ್ಮಯ್ಯ ಮ್ಯೂಸಿಯಂ ರೂಪುಗೊಂಡಿರುವುದು ಭಾರತಕ್ಕೆ ಹೆಮ್ಮೆ. ಮ್ಯೂಸಿಯಂನಲ್ಲಿ ತಿಮ್ಮಯ್ಯ ಸೇನಾ ಜೀವನ ನೋಡಿ, ಭಾರತೀಯ ಸೇನೆಯ ಬಗ್ಗೆ ಹೆಮ್ಮೆಯ ಭಾವನೆಯೊಂದಿಗೆ ಹೊರಬರುತ್ತಿರುವಂತೆಯೇ, ಪ್ರತಿಯೊಬ್ಬ ಸಂದರ್ಶಕನ ಮನದಲ್ಲಿ ವ್ಯಕ್ತಗೊಳ್ಳುವ ಭಾವನೆ ಒಂದೇ. ಭಾರತದ ಹೆಮ್ಮೆಯ ಧೀರ ಸೇನಾಧಿಕಾರಿ ಜನರಲ್ ತಿಮ್ಮಯ್ಯ ಅವರಿಗೆ ಗೌರವದ ಸೆಲ್ಯೂಟ್ ಎಂದು ಶ್ರೀಶಾ ಹೇಳಿದರು.
ಗಿರಿ ಶ್ರೇಣಿಗಳ ನಡುವಿನ ಮಡಿಕೇರಿಯಲ್ಲಿ ಮಂಜಿನ ಮುಸುಕಿನಲ್ಲಿ ಬಾಲ್ಯ ಕಳೆದ ತಿಮ್ಮಯ್ಯ ಅವರು, ನಂತರ ಕಾಶ್ಮೀರದ ಪರ್ವತದ ಹಿಮಚ್ಚಾಧಿತ ಪ್ರದೇಶಗಳಲ್ಲಿ ತನ್ನ ಪರಾಕ್ರಮವನ್ನು ಜನರಲ್ ತಿಮ್ಮಯ್ಯ ಅವರು ತೋರಿದ್ದಾರೆ ಎಂದು ತಿಳಿಸಿದರು.
ಪೊಲೀಸ್ ವೃತ್ತ ನಿರೀಕ್ಷಕರಾದ ಶಿವಶಂಕರ, ಪೊಲೀಸ್ ಉಪ ನಿರೀಕ್ಷಕರಾದ ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಆ.28 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಮೂವರು…

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.