ಸೋಮವಾರಪೇಟೆ ಮಾ.31 : ಸೋಮವಾರಪೇಟೆ ತಾಲ್ಲೂಕಿನ 15 ಕೆಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳು ಶುಕ್ರವಾರ ಮೊದಲ ಕನ್ನಡ ಭಾಷಾ ಪರೀಕ್ಷೆ ಬರೆದರು.
ತಾಲ್ಲೂಕಿನಲ್ಲಿ ಒಟ್ಟು 2382 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದರು. ಅದರಲ್ಲಿ 2376 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 6 ವಿದ್ಯಾರ್ಥಿಗಳು ಗೈರಾಗಿದ್ದರು.ಕಳೆದ ಸಾಲಿನಲ್ಲಿ ಅನುತೀರ್ಣಗೊಂಡಿದ್ದ 22 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 8 ವಿದ್ಯಾರ್ಥಿಗಳು ಗೈರಾಗಿದ್ದರು. ಒಟ್ಟು 2398 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಮೊದಲ ಪರೀಕ್ಷೆ ಯಾವುದೇ ಗೊಂದಲಗಳಿಲ್ಲದೆ ನಡೆಯಿತು. ಏಪ್ರಿಲ್ 15ರ ವರಗೆ ಪರೀಕ್ಷೆ ನಡೆಯಿದ್ದು, ಏ.3ರಂದು ಗಣಿತ ಪರೀಕ್ಷೆ ಇದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಹೇಳಿದರು.










