ಮಡಿಕೇರಿ ಏ.1 : ಕೊಡಗು ಜಿಲ್ಲಾ ಪೊಲೀಸ್ ಘಟಕದ ವಿವಿಧ ಠಾಣೆ, ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸಿ ಮಾ.31 ರಂದು ನಿವೃತ್ತಿ ಹೊಂದಿದ ಪಿಎಸ್ಐ ಎಂ.ಡಿ.ಅಪ್ಪಾಜಿ ಮತ್ತು ಎಎಸ್ಐ ಜಿ.ಎಸ್.ಧರ್ಮಪ್ಪ ಅವರನ್ನು ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.







