ಮಡಿಕೇರಿ ಏ.1 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಯನ್ನಾಗಿ ಟಿ.ಕೆ.ಸಾಯಿಕುಮಾರ್ ಅವರನ್ನು ಕಣಕ್ಕಿಳಿಸಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಘೋಷಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಬೆಂಗಳೂರಿನಲ್ಲಿ ಮಡಿಕೇರಿ ಕ್ಷೇತ್ರ ಸೇರಿದಂತೆ 142 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದರು ಎಂದು ತಿಳಿಸಿದ್ದಾರೆ.
ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಧ್ಯದಲ್ಲೇ ಅಭ್ಯರ್ಥಿಯನ್ನು ಘೋಷಿಸಲಾಗುವುದೆಂದು ಹೇಳಿದ್ದಾರೆ.









