ಮಡಿಕೇರಿ ಏ.1 : ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮಡಿಕೇರಿ ಬ್ಲಾಕ್ ಅಧ್ಯಕ್ಷರಾಗಿ ಎಂ.ಎಂ.ಮೊಹಮ್ಮದ್ ಯಾಕುಬ್ ಆಯ್ಕೆಯಾಗಿದ್ದಾರೆ.
ರಾಜ್ಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಹಾಗೂ ಉಪಾಧ್ಯಕ್ಷ ಪಿ.ಸಿ.ಹಸೈನಾರ್ ಹಾಜಿ ಅವರ ಶಿಫಾರಸ್ಸಿನ ಮೇರೆಗೆ ಮೊಹಮ್ಮದ್ ಯಾಕುಬ್ ಅವರನ್ನು ನೇಮಕ ಮಾಡಿರುವುದಾಗಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ತಿಳಿಸಿದ್ದಾರೆ.








