ಮಡಿಕೇರಿ ಏ.1 : ಜನರಲ್ ತಿಮ್ಮಯ್ಯ ನವರ 117 ನೇ ಜನ್ಮದಿನಾಚರಣೆ ಅಂಗವಾಗಿ ನಗರದ ಮುಖ್ಯರಸ್ತೆ ಯಲ್ಲಿರುವ 50 ವರ್ಷ ತುಂಬಿರುವ ಜನರಲ್ ತಿಮ್ಮಯ್ಯ ಅವರ ಪ್ರತಿಮೆಗೆ ಮಡಿಕೇರಿ ಕೊಡವ ಸಮಾಜ ಹಾಗೂ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ವತಿಯಿಂದ ಗೌರವ ನಮನ ಸಲ್ಲಿಸಲಾಯಿತು.
ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಕಾರ್ಯಾಧ್ಯಕ್ಷ ನಂದಿನೆರವಂಡ ಚೀಯಣ್ಣ, ಸಂಚಾಲಕಿ ಕನ್ನಂಡ ಕವಿತ ಬೊಳ್ಳಪ್ಪ, ಶಾಲಾ ಪ್ರಾಂಶು ಪಾಲೆ ಕಲ್ಲ್ ಮಾಡಂಡ ಸರಸ್ವತಿ,ಮಡಿಕೇರಿ ಕೊಡವ ಸಮಾಜದ ಹಾಗು ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ನಂದಿನೆರವಂಡ ದಿನೇಶ್ ,ಕನ್ನಂಡ ಸಂಪತ್, ಬೊಪ್ಪಂಡ ಸರಳಾ ಕರುಂಬಯ್ಯ, ಕಾಂಡೇರ ಲಲ್ಲುಕುಟ್ಟಪ್ಪ, ಮುಕ್ಕಾಟಿರ ಪೊನ್ನಮ್ಮ, ಮೂವೆರ ಜಯರಾಂ, ಚೊಟ್ಟೆಯಂಡ ಸಂಜು ಕಾವೇರಪ್ಪ, ಕಾಳಚಂಡ ಅಪ್ಪಣ್ಣ,ಮಂಡಿರ ಸದಾಮುದ್ದಪ್ಪ, ಪುತ್ತರಿರ ಕಾಳಯ್ಯ, ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಹಾಗೂ ಶಾಲಾ ಶಿಕ್ಷಕ ವೃಂದ ಪ್ರತಿಮೆಗೆ ಪುಷ್ಪರ್ಚನೆ ಮಾಡಿ ಗೌರವ ಸಲ್ಲಿಸಿದರು.
ನಂತರ ಸಾಮೂಹಿಕ ರಾಷ್ಟ್ರಗೀತೆ ಹಾಡಿದರು.









