ಮಡಿಕೇರಿ ಏ.1 : ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾಮದ ಶ್ರೀ ನಂಜುಂಡೇಶ್ವರ ಸ್ವಾಮಿಯ ವಾರ್ಷಿಕೋತ್ಸವವನ್ನು ಮುಂದೂಡಲಾಗಿದೆ.
ಏ.3 ಮತ್ತು 4 ರಂದು ಅದ್ಧೂರಿಯಿಂದ ಆಚರಿಸಬೇಕಾಗಿದ್ದ ಶ್ರೀ ನಂಜುಂಡೇಶ್ವರ ದೇವಾಲಯದ ವಾರ್ಷಿಕೋತ್ಸವವನ್ನು ಚುನಾವಣಾ ನೀತಿ ಸಂಹಿತೆ ಕಾನೂನಿನಡಿಯಲ್ಲಿ ಪ್ರಸಾದ ವಿತರಣೆ, ಅನ್ನಸಂತರ್ಪಣೆಗೆ ಹಾಗೂ ರಾಜಕೀಯ ನಾಯಕರು ಭಾಗವಹಿಸಲು ಅವಕಾಶ ಇಲ್ಲದಿರುವುದರಿಂದ ನೀತಿ ಸಂಹಿತೆ ಮುಗಿದ ನಂತರ ಮುಂದಿನ ದಿನಾಂಕ ನಿಗದಿಗೊಳಿಸಿ ಆಚರಿಸಲಾಗುವುದೆಂದು ದೇವಾಲಯ ಸಮಿತಿ ಕಾರ್ಯದರ್ಶಿ ಕೆ.ಎಸ್.ರತೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








