ಮಡಿಕೇರಿ ಏ.1 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ 2023-24 ನೇ ಸಾಲಿಗೆ ವಿರಾಜಪೇಟೆ ತಾಲ್ಲೂಕು ಆರ್ಜಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ 6 ನೇ ತರಗತಿಗೆ ಉಚಿತ (ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ(ಒಬಿಸಿ) ಶೇ.25 ರಷ್ಟು ಸೀಟು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, 5 ನೇ ತರಗತಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ವಸತಿ ಶಾಲೆಯಲ್ಲಿ ಪ್ರತಿ ವಿದ್ಯಾರ್ಥಿಗೆ ಉಚಿತ ವಸತಿ, ಊಟದ ಸೌಲಭ್ಯ, ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ವರ್ಷಕ್ಕೆ ಸಮವಸ್ತ್ರ, ಬೂಟು, ಕಾಲು ಚೀಲ ಪೂರೈಕೆ, ಪಠ್ಯ ಪುಸ್ತಕ ಮತ್ತು ಲೇಖನ ಸಾಮಗ್ರಿ, ಉಚಿತವಾಗಿ ವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಗ್ರಿ, ಗ್ರಂಥಾಲಯಗಳ ಸೌಲಭ್ಯ ಒದಗಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಆರ್ಜಿ ಗ್ರಾಮ, ಪೆರಂಬಾಡಿ, ವಿರಾಜಪೇಟೆ ತಾಲ್ಲೂಕು ದೂ.ಸಂ.9741209826, 9686138688 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.









