ಮಡಿಕೇರಿ ಏ.1 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ 2023-24 ನೇ ಸಾಲಿಗೆ ಸೋಮವಾರಪೇಟೆ ತಾಲ್ಲೂಕು ಖ್ಯಾತೆ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ 6 ನೇ ತರಗತಿಗೆ ಉಚಿತ(ಸಿಬಿಎಸ್ಇ)(ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯ ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ(ಒಬಿಸಿ) ಶೇ.25 ರಷ್ಟು ಸೀಟು ಲಭ್ಯವಿದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, 5 ನೇ ತರಗತಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ವಸತಿ ಶಾಲೆಯಲ್ಲಿ ಪ್ರತಿ ವಿದ್ಯಾರ್ಥಿಗೆ ಉಚಿತ ವಸತಿ, ಊಟದ ಸೌಲಭ್ಯ, ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ವರ್ಷಕ್ಕೆ ಸಮವಸ್ತ್ರ, ಬೂಟು, ಕಾಲು ಚೀಲ ಪೂರೈಕೆ, ಪಠ್ಯ ಪುಸ್ತಕ ಮತ್ತು ಲೇಖನ ಸಾಮಗ್ರಿ, ಉಚಿತವಾಗಿ ವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಗ್ರಿ, ಗ್ರಂಥಾಲಯಗಳ ಸೌಲಭ್ಯ ಒದಗಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ದೂ.ಸಂ.7676473767/ 9632746411 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.