ಮಡಿಕೇರಿ ಏ.1 : ಫೀಲ್ಡ್ ಮಾಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಸೂಕ್ಷ್ಮಾಣು ಜೀವ ವಿಜ್ಞಾನ ವಿಭಾಗದ ವತಿಯಿಂದ ಪರಿಸರ, ಸಮಾಜ ಮತ್ತು ಆರ್ಥಿಕತೆ: ಸುಸ್ಥಿರ ನಿರ್ವಹಣೆ ಮತ್ತು ಮುಂದಿನ ಪೀಳಿಗೆಗೆ ಕೌಶಾಲ್ಯಾಭಿವೃದ್ಧಿ ಎಂಬ ವಿಷಯದ ಕುರಿತು ರಾಜ್ಯ ಮಟ್ಟದ ಅಭಿಶಿಕ್ಷಣ ಮತ್ತು ಕಾರ್ಯಾಗಾರ ನಡೆಯಿತು.
ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಬೆಂಗಳೂರಿನ ಸುಸ್ಥಿರ ನಿರ್ವಹಣಾ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಡಾ.ಕೆ.ವಿ. ಜಗನ್ ಮೋಹನ್ ರಾವ್ ಸುಸ್ಥಿರಾಭಿವೃದ್ಧಿ ಹಾಗೂ ಉದ್ಯೋಗಾವಕಾಶ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಬೆಂಗಳೂರಿನ ಗಾರ್ಡನ್ ಸಿಟಿ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಕಾಮರ್ಸ್ ಐಂಡ್ ಮ್ಯಾನೇಜ್ಮೆಂಟ್ ನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಪಿ.ಎ. ಶ್ವೇತ ಕೌಶಲ್ಯವರ್ಧನೆ ಇಂದಿನಅಗತ್ಯತೆ ವಿಷಯದ ಕುರಿತು ಮಾಹಿತಿ ನೀಡಿದರು.
ವೇಲೆಂಟಾ ಅಕಾಡೆಮಿ ಎಲ್‍ಎಲ್ಪಿ ನಿರ್ದೇಶಕರಾದ ಅನುರಾಧ ಸಂವಹನ ಕೌಶಲ್ಯಾಭಿವೃದ್ಧಿ ವಿಷಯದ ಕುರಿತು ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ರಾಘವ.ಬಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದ ಸಂಚಾಲಕರು ಹಾಗೂ ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಡಾ. ಗೀತಾಂಜಲಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹ ಸಂಚಾಲಕರು ಹಾಗೂ ಸೂಕ್ಷ್ಮಾಣು ಜೀವವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಕೆ.ಸೌಮ್ಯ ವಂದಿಸಿದರು. ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು, ಕಾಲೇಜಿನ ಬೋಧಕ ಮತ್ತು ಬೋಧಕೇತರರು ಭಾಗವಹಿಸಿದ್ದರು.