ಮಡಿಕೇರಿ ಏ.1 : ಸಾಮಾಜಿಕ ಜಾಲತಾಣಗಳಾದ ವ್ಯಾಟ್ಸ್ ಅಪ್, ಯೂಟ್ಯೂಬ್, ಫೇಸ್, ಬುಕ್, ಟ್ವಿಟ್ಟರ್ ಸೇರಿದಂತೆ ಯಾವುದೇ ಮಾಧ್ಯಮದಲ್ಲಿ ಚುನಾವಣಾ ಘೋಷಿತ ಅಭ್ಯರ್ಥಿಗಳು, ಆಕಾಂಕ್ಷಿಗಳು, ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸುವವರು ಯಾರೇ ಆಗಿರಲಿ ಚುನಾವಣಾ ಪ್ರಚಾರದ ಅಂಶಗಳನ್ನು ಒಳಗೊಂಡ ವಿಚಾರಗಳನ್ನು ಪೋಸ್ಟ್ ಮಾಡುವುದಿದ್ದಲ್ಲಿ ಅನುಮತಿ ಪಡೆಯವುದು ಕಡ್ಡಾಯವೆಂದು ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸ್ಪಷ್ಟಪಡಿಸಿದ್ದಾರೆ.
ಚುನಾವಣಾ ನಾಮಪತ್ರ ಸಲ್ಲಿಕೆಯ ಬಳಿಕ ಈ ರೀತಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಿದ ವೆಚ್ಚವೂ ಅಭ್ಯರ್ಥಿಯ ಲೆಕ್ಕಕ್ಕೆ ಒಳಪಡಲಿದೆ ಎಂದರು.
ಚುನಾವಣಾ ನೀತಿ ಸಂಹಿತೆಗೆ ಅನುಗುಣವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣೆಗೆ ಸಂಬAಧಿಸಿದ ಯಾವುದೇ ವಿಚಾರಗಳನ್ನು ಹಾಕುವುದಿದ್ದಲ್ಲಿ ಅದಕ್ಕೆ ಅನುಮತಿಯನ್ನು ಕಡ್ಡಾಯವಾಗಿರುತ್ತದೆ. ಈ ರೀತಿ ಅನುಮತಿ ಪಡೆಯದೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಕೆಲವರಿಗೆ ಈಗಾಗಲೆ ಕಾರಣ ಕೇಳಿ ನೋಟಿಸ್ ನೀಡಿ ಅವರ ಅಭಿಪ್ರಾಯವನ್ನು ಪಡೆಯಲಾಗಿದೆ ಎಂದು ತಿಳಿಸಿದರು.
ತಮ್ಮ ಪಕ್ಷದ ಗುರುತು, ಬಾವುಟ, ಬ್ಯಾನರ್‌ಗಳನ್ನು ಅಳವಡಿಸುವುದಿದ್ದಲ್ಲಿ ಆಯಾ ಖಾಸಗಿ ಜಾಗದ ಮಾಲೀಕರ ಒಪ್ಪಿಗೆಯೊಂದಿಗೆ ಡಿಸ್ಟ್ರಿಕ್ಟ್ ಮೀಡಿಯಾ ಸರ್ಟಿಫಿಕೇಶನ್ ಅಂಡ್ ಮಾನಿಟರಿಂಗ್ ಕಮಿಟಿಯಿಂದ ಅನುಮತಿ ಪಡೆಯುವುದು ಅತ್ಯವಶ್ಯವೆಂದರು.










