ಸೋಮವಾರಪೇಟೆ ಏ.2 : ಮಗಳನ್ನು, ಮತವನ್ನು ನೀಡುವಾಗ ಯೋಗ್ಯರಿಗೆ ನೀಡಬೇಕು. ಅಳಿಯ ಒಳ್ಳೆಯವನಾದರೆ ಮಗಳು ಚೆನ್ನಾಗಿ ಇರುತ್ತಾಳೆ, ಯೋಗ್ಯ ಜನಪ್ರತಿನಿಧಿಯಿಂದ ರಾಜ್ಯ, ದೇಶ ಚೆನ್ನಾಗಿರುತ್ತದೆ, ಪ್ರಜೆಗಳು ನೆಮ್ಮದಿಯಿಂದ ಇರುತ್ತಾರೆ ಎಂದು ಬಸವಾ ಪಟ್ಟಣ ತೋಂಟದಾರ್ಯ ಸಂಸ್ಥಾನ ಮಠದ ಶ್ರೀಸ್ವತಂತ್ರ ಬಸವಲಿಂಗ ಸ್ವಾಮೀಜಿ ಹೇಳಿದ್ದಾರೆ.
ಸೋಮವಾರಪೇಟೆಯ ಯಡೂರು ಬಿ.ಟಿ.ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ, ಸಂಯುಕ್ತಾಶ್ರಯದಲ್ಲಿ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದ್ದ ಶಿವಕುಮಾರ ಸ್ವಾಮೀಜಿ ಅವರ 116 ನೇ ಜನ್ಮ ಜಯಂತಿ, ಸರಸ್ವತಿ ಪೂಜೆ ಹಾಗೂ ಕಾಲೇಜು ಸಂಸ್ಥಾಪಕರಿಗೆ ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಪ್ರತಿಯೊಬ್ಬರು ಮತದಾನ ಮಾಡಬೇಕು. ಜನಸಾಮಾನ್ಯರಿಗೆ ದೀಪಾವಳಿ, ಯುಗಾದಿ ಹೇಗೆ ಹಬ್ಬವಾಗುತ್ತದೆಯೋ ಅದೇ ರೀತಿ ಚುನಾವಣೆಯೂ ಪ್ರಜಾಪ್ರಭುತ್ವದ ಹಬ್ಬವಾಗಬೇಕು ಎಂದು ಬಣ್ಣಿಸಿದರು.
ಇಂದಿನ ವಿದ್ಯಾರ್ಥಿಗಳು ರಾಷ್ಟ್ರದ ಭವ್ಯ ಪ್ರಜೆಗಳು ಆದ್ದರಿಂದ ಯಾರೂ ತಪ್ಪಿಸಿಕೊಳ್ಳದೆ ಮತದಾನ ಮಾಡಬೇಕೆಂದರು. ನನ್ನ ಒಂದು ಮತದಾನದಿಂದ ಏನಾಗುತ್ತದೆ ಎಂಬ ಭಾವನೆ ಬೇಡ. ಯಾವುದೇ ಆಮಿಷಗಳಿಗೆ ಬಲಿಯಾಗದೆ, ತಮ್ಮ ಮತಗಳನ್ನು ಮಾರಿಕೊಳ್ಳದೆ ನಿಮ್ಮ ಹಕ್ಕನ್ನು ಚಲಾಯಿಸಿ ಎಂದರು.
ಇಂದು ಕಾಯಕಯೋಗಿ, ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಜನ್ಮದಿನ ನಾಡಿನಾದ್ಯಂತ ಆಚರಿಸುತ್ತಿದ್ದೇವೆ ಸಿದ್ದಗಂಗಾ ಮಠದಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಕ್ಕಳಿಗೆ ಆಶ್ರಯ ನೀಡಿ ವಿದ್ಯಾದಾನ ಮಾಡಲಾಗುತ್ತಿದೆ, ಲಕ್ಷಾಂತರ ಮಂದಿ ವಿದ್ಯಾವಂತರಾಗಿದ್ದಾರೆ. ಅನೇಕ ಮಂದಿ ಉನ್ನತ ಸ್ಥಾನದಲ್ಲಿದ್ದಾರೆ ಎಂದ ಅವರು ಶ್ರೀಗಳ ತತ್ವ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಇಂದು ವಿದ್ಯೆಯ ಅಧಿದೇವತೆ ಸರಸ್ವತಿ ಪೂಜೆ ನಡೆಸಿದ್ದಿರಿ ದೇವರ ಆಶೀರ್ವಾದ ನಿಮ್ಮೆಲ್ಲರ ಮೇಲಿರಲಿ ಹಾಗೆಯೇ ಕಾಲೇಜು ಸಂಸ್ಥಾಪಕರುಗಳನ್ನು ಕರೆಯಿಸಿ ಕೃತಜ್ಞತೆ ಸಲ್ಲಿಸಿರುವುದು ಅಭಿನಂದನಾರ್ಹ ಕಾರ್ಯವೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜು ಸಂಸ್ಥಾಪಕ ಸಮಿತಿ ಕಾರ್ಯದರ್ಶಿ ಎ.ಪಿ.ಶಂಕರಪ್ಪ ಹಾಗೂ ಶಾರದಮ್ಮ ದಂಪತಿಗಳು, ಸಂಸ್ಥಾಪಕ ಅಧ್ಯಕ್ಷ ರಾಗಿದ್ದ ದಿವಂಗತ ಬಿ.ಟಿ.ಚೆನ್ನಯ್ಯನವರ ಪರವಾಗಿ ಅವರ ಮೊಮ್ಮಗ ರೋಹಿತ್ ರಾಮದೇವ್ ಅವರುಗಳನ್ನು ಕೃತಜ್ಞತಾ ಪೂರ್ವಕವಾಗಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಧನಲಕ್ಷ್ಮಿ ವಹಿಸಿದ್ದರು. ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಎಸ್.ಮಹೇಶ್, ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶಪಾಲರಾದ ಪ್ರವೀಣ್, ಕಾಲೇಜು ಹಿಂದಿನ ಆಡಳಿತ ಮಂಡಳಿ ಸದಸ್ಯರಾದ ಎ.ಪಿ.ಶಿವರುದ್ರಪ್ಪ, ಪುಪ್ಪಯ್ಯ, ಯಡೂರು ಗ್ರಾಮ ಸಮಿತಿ ಅಧ್ಯಕ್ಷ ವೈ.ಈ.ವಿಜಯ್ ಮತ್ತಿತರರು ಉಪಸ್ಥಿತರಿದ್ದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*