ಸೋಮವಾರಪೇಟೆ ಏ.2 : ಸೋಮವಾರಪೇಟೆ ಸಮೀಪದ ಕೂತಿನಾಡು ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಎಂದೇ ಖ್ಯಾತಿಯಾಗಿರುವ ಸುಗ್ಗಿ ಉತ್ಸವಕ್ಕೆ ಪೂರ್ವಭಾವಿಯಾಗಿ ದೇವಿಯ ತವರೂರೆಂದು ಕರೆಯಲ್ಪಡುವ ಕೂತಿ ಗ್ರಾಮದ ಚಾವಡಿ ಕಟ್ಟೆಯಲ್ಲಿ ಭಾನುವಾರ ವಿಶೇಷ ಪೂಜೆ ನಡೆಯಿತು. ಸುಗ್ಗಿ ಉತ್ಸವ ಇದೇ ಏ.10 ರಂದು ನಗರಳ್ಳಿಯಲ್ಲಿ ನಡೆಯಲಿದೆ.
ಅನಾದಿಕಾಲದಿಂದಲೂ ನಡೆದು ಕೊಂಡು ಬಂದAತೆ ಕೂತಿ ಗ್ರಾಮದ ಚಾವಡಿ ಕಟ್ಟೆಯಲ್ಲಿ ಗ್ರಾಮದ ಮನೆಗಳಲ್ಲಿರುವ ಬಂದುಕುಗಳನ್ನು ತಂದಿಟ್ಟು ನಂತರ ಸಾಮೂಹಿಕವಾಗಿ ಪೂಜೆ ಮಾಡಲಾಯಿತು. ನಂತರ ದೇವರ ಕಟ್ಟೆಗೆ ಗ್ರಾಮಸ್ಥರು ಬಂದೂಕು ಹಿಡಿದು ಪ್ರದಕ್ಷಿಣೆ ಬಂದು ಬಂದುಕಿನಿAದ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಮೂಲಕ ಸುಗ್ಗಿ ಪದ್ಧತಿಯನ್ನು ಆಚರಿಸುವುದರೊಂದಿಗೆ ಸುಗ್ಗಿ ಉತ್ಸವಕ್ಕೆ ಚಾಲನೆ ನೀಡಲಾಯಿತು.
ಪ್ರಮುಖ ಸುಗ್ಗಿ ಆಚರಣೆಯು ಏಪ್ರಿಲ್ ಮೇ ತಿಂಗಳಲ್ಲಿ ನಗರಳ್ಳಿ ಗ್ರಾಮದ ಸುಗ್ಗಿ ಕಟ್ಟೆ ಹಾಗೂ 12 ದೇವರ ಬನದಲ್ಲಿ ವಿವಿಧ ಆಚರಣೆಗಳೊಂದಿಗೆ ನಡೆಯುತದೆ.
ಈ ಆಚರಣೆಯಲ್ಲಿ ಕೂತಿನಾಡು ವ್ಯಾಪ್ತಿಗೆ ಒಳಪಡುವ ಕೂತಿ ಗ್ರಾಮ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೇಕನಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟಡಕೊಪ್ಪ, ಹಳ್ಳಿಯೂರು, ಕೊತ್ತನಳ್ಳಿ, ಇನಕನಳ್ಳಿ, ಬಿಕಳ್ಳಿ, ಬೆಂಕಳ್ಳಿ, ಕುಡಿಗಾಣ, ನಾಡ್ನಳ್ಳಿ, ತಡ್ಡಿಕೊಪ್ಪ ಹಾಗೂ ಸಕಲೇಶಪುರ ತಾಲೂಕಿನ ಒಡಳ್ಳಿ ಗ್ರಾಮದ ಎಲ್ಲಾ ವರ್ಗದ ಜನರು ಒಂದುಗೂಡಿ ಬಹಳ ಶ್ರದ್ಧಾಭಕ್ತಿಯಿಂದ ಸುಗ್ಗಿಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ.
ಸುಗ್ಗಿ ಆಚರಣೆಯಲ್ಲಿ 12 ಬನ-ರಂಗಗಳಿದ್ದು ಕೊನೆಯ ದಿನ ಕಂಬತಳೆ ರಂಗ,ಸುಗ್ಗಿ ರಂಗ ಎಂಬಲ್ಲಿ ಸುಗ್ಗಿಯ ವಿಶೇಷತೆಗಳನ್ನು ಸಾರುವ ಆಚರಣೆಗಳು ನಡೆಯುತ್ತದೆ.
ವಿಶೇಷ ಪೂಜೆಯ ಸಂದರ್ಭ ಕೂತಿ ಗ್ರಾಮದ ಅಧ್ಯಕ್ಷ ಹೆಚ್.ಡಿ.ಮೋಹನ್. ಉಪಾಧ್ಯಕ್ಷ ಜಗದೀಶ್, ಕಾರ್ಯದರ್ಶಿ ವಿನೋದ್ ಕುಮಾರ್ ಖಜಾಂಚಿ ಕಿಶನ್, ಗ್ರಾಮದ ಪಟೇಲರಾದ ಬಸವರಾಜ್, ಅರ್ಚಕರಾದ ಅನಂತ ರಾಮ್, ಕೆ.ಟಿ.ಪರಮೇಶ್, ಗಣೇಶ್, ದಿನೇಶ್, ಗಿರೀಶ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.










