ಮಡಿಕೇರಿ ಏ.2 : ಸಮಾಜದಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿದ್ದು, ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಇಲಾಖೆಯ ಪಾತ್ರ ಮಹತ್ವದಾಗಿದೆ ಎಂದು ನಿವೃತ್ತ ವೃತ್ತನಿರೀಕ್ಷಕ ಎನ್.ದಿವಾಕರ್ ಹೇಳಿದರು. ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ‘ಧ್ವಜ ದಿನಾಚರಣೆ’ ಹಾಗೂ ‘ಫೀಲ್ಡ್ ಕೆ.ಎಂ.ಮಾರ್ಷಲ್ ಕಾರ್ಯಪ್ಪ ಟ್ರೋಫಿ’ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಪೊಲೀಸರು ಕರ್ತವ್ಯ ನಿರ್ವಹಿಸುವ ಸಂದರ್ಭ ಹಲವಾರು ಸವಾಲುಗಳು ಎದುರಾಗುತ್ತವೆ. ಈ ಸಂದರ್ಭ ಧೈರ್ಯಗುಂದದೇ ಎಲ್ಲಾ ಸಂಕಷ್ಟಗಳನ್ನು ಎದುರಿಸಿ ಸಮಾಜದ ಸ್ವಾಸ್ಥö್ಯ ಕಾಪಾಡಲು ಪೊಲೀಸರು ಶ್ರಮಿಸುತ್ತಾರೆ. ಸಾರ್ವಜನಿಕರು ಈ ಸೇವೆಯನ್ನು ಮುಕ್ತವಾಗಿ ಶ್ಲಾಘಿಸಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ನಿವೃತ್ತ ಏರ್ ಮಾರ್ಷಲ್ ನಂದಾ ಕಾರ್ಯಪ್ಪ, ಪೊಲೀಸ್ ಇಲಾಖೆಯ ಕಾರ್ಯ ದಕ್ಷತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ ಪೊಲೀಸ್ ಧ್ವಜ ದಿನಾಚರಣೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸೇವೆಯನ್ನು ಸ್ಮರಿಸುವ ದಿನವಾಗಿದೆ ಎಂದು ಹೇಳಿದರು. ದೇಶದ ಗಡಿಯಲ್ಲಿ ಸೈನಿಕರು ಸೇವೆ ಸಲ್ಲಿಸುವ ರೀತಿಯಲ್ಲೇ ದೇಶದ ಒಳಗೆ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಶ್ರಮ ವಹಿಸುತ್ತಿದೆ ಎಂದು ಹೇಳಿದರು.
::: ಕಾರ್ಯಪ್ಪ ಟ್ರೋಫಿ :::
ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಕೆಗಾಗಿ ನೀಡಲಾಗುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿಯನ್ನು ಈ ಬಾರಿ ಕುಶಾಲನಗರ ಗ್ರಾಮಾಂತರ ಠಾಣೆಯ ಸಿಬ್ಬಂದಿ ವಿ.ಪ್ರಕಾಶ್ ಅವರು ಪಡೆದುಕೊಂಡರು. ಇತ್ತೀಚೆಗೆ ಕುಶಾಲನಗರದ ಅಮನ್‌ವನ ರೆಸಾರ್ಟ್ನಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸ್ ಸಿಬ್ಬಂದಿ ವಿ.ಪ್ರಕಾಶ್ ಪ್ರಮುಖ ಪಾತ್ರ ವಹಿಸಿದ್ದರು. ತಮ್ಮ ತಂದೆ ಫೀ.ಮಾ.ಕಾರ್ಯಪ್ಪ ಅವರ ಹೆಸರಿನಲ್ಲಿ ನೀಡುತ್ತಿರುವ ಟ್ರೋಫಿಯನ್ನು ಏರ್‌ಮಾರ್ಷಲ್ ನಂದಾ ಕಾರ್ಯಪ್ಪ ಅವರು ವಿತರಿಸಿ ಶುಭ ಕೋರಿದರು.
::: ಅತ್ಯುತ್ತಮ ಪ್ರಶಸ್ತಿ :::
ವಿವಿಧ ಪ್ರಕರಣಗಳ ಪತ್ತೆ ಕಾರ್ಯದಲ್ಲಿ ಉತ್ತಮ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ‘ಜಿಲ್ಲಾ ವಿಶೇಷ ದಳದ’ ಪೊಲೀಸ್ ಸಿಬ್ಬಂದಿ ಸವಿತಾ ಅವರಿಗೆ ‘ಅತ್ಯುತ್ತಮ ಪೊಲೀಸ್ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಪ್ರದಾನಕ್ಕೂ ಮೊದಲು ಜಿಲ್ಲಾ ಪೊಲೀಸ್ ತುಕಡಿ ಪಥ ಸಂಚಲನದ ಮೂಲಕ ಅತಿಥಿಗಳಿಗೆ ಗೌರವ ವಂದನೆ ಸಲ್ಲಿಸಿತು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ವಿವಿಧ ಪೊಲೀಸ್ ಉಪ ವಿಭಾಗಗಳ ಡಿವೈಎಸ್‌ಪಿಗಳು, ವೃತ್ತ ನಿರೀಕ್ಷಕರು ಹಾಗೂ ಉಪ ನಿರೀಕ್ಷಕರು ಉಪಸ್ಥಿತರಿದ್ದರು.
Breaking News
- *ರಾಷ್ಟ್ರೀಯ ಹಾಕಿ ತಂಡಕ್ಕೆ ಪಿ.ಯು.ತನುಷ್ ಆಯ್ಕೆ*
- *ಹೆಬ್ಬಾಲೆ ಸರ್ಕಾರಿ ಶಾಲೆಯಲ್ಲಿ ಗಮನ ಸೆಳೆದ ಇಂಗ್ಲಿಷ್ ಭಾಷಾ ಮೇಳ*
- *”ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ”ಗೆ ಕೃತಿಗಳ ಆಹ್ವಾನ*
- *ಮಾವಿನಹಳ್ಳ ಹಾಡಿ ಮತ್ತು ಕಟ್ಟೆ ಹಾಡಿಯ ಅರಣ್ಯ ಹಕ್ಕು ಗ್ರಾಮಸಭೆ*
- *ಬಾಳೆಲೆ : ಮಣ್ಣು ಪರೀಕ್ಷೆ ಮತ್ತು ಸಸ್ಯ ಪೋಷಕಾಂಶಗಳ ನಿರ್ವಹಣೆ ಕುರಿತು ಮಾಹಿತಿ ಕಾರ್ಯಕ್ರಮ*
- *ಜ.26 ರಂದು ಗಣರಾಜ್ಯೋತ್ಸವ ದಿನಾಚರಣೆ*
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*