ಮಡಿಕೇರಿ ಏ.2 : ಪೊಲೀಸ್ ಇಲಾಖೆಯಲ್ಲಿನ ಶ್ಲಾಘನೀಯ ಸೇವೆಗೆ ನೀಡಲಾಗುವ ಮುಖ್ಯಮಂತ್ರಿಗಳ ಪದಕಕ್ಕೆ ಕೊಡಗು ಜಿಲ್ಲೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ. ಮಡಿಕೇರಿ ವಿಭಾಗದ ಸಿಐಡಿ ಅರಣ್ಯ ಸಂಚಾರಿ ಪೊಲೀಸ್ ದಳದ ಉಪನಿರೀಕ್ಷಕಿ ಸಿ.ಯು.ಸವಿ ಹಾಗೂ ಜಿಲ್ಲಾ ಅಪರಾಧ ಪತ್ತೆ ದಳದ ಮುಖ್ಯಪೇದೆ ಎಂ.ಎನ್.ನಿರಂಜನ್ ಪದಕ ವಿಜೇತರು.
ಸವಿ ಅವರು ಕಳೆದ 13 ವರ್ಷಗಳಿಂದ ಪೊಲೀಸ್ ಸೇವೆಯಲ್ಲಿದ್ದು, ನಂಜನಗೂಡು, ಬೈಲುಕುಪ್ಪೆ ಸೇರಿದಂತೆ ವಿವಿಧೆಡೆ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಮಡಿಕೇರಿ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಮೂಲತಃ ಕೊಳಕೇರಿಯ ನಿವಾಸಿಯಾಗಿದ್ದಾರೆ.
ಮಡಿಕೇರಿಯ ಅಶೋಕಪುರ ನಿವಾಸಿಯಾಗಿರುವ ಎಂ.ಎನ್.ನಿರಂಜನ್ ಅವರು ಕಳೆದ 22 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಜಿಲ್ಲಾ ಅಪರಾಧ ಗುಪ್ತ ದಳದಲ್ಲಿ ಸೇವೆಯಲ್ಲಿರುವ ನಿರಂಜನ್ ಅವರು ಈ ಹಿಂದೆ ಮಡಿಕೇರಿ ಗ್ರಾಮಾಂತರ ಠಾಣೆ ಸೇರಿದಂತೆ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದರು. ಅಪರಾಧ ಗುಪ್ತ ದಳದಲ್ಲಿ ಪತ್ತೆ ಕಾರ್ಯದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಇವರನ್ನು ಮುಖ್ಯಮಂತ್ರಿ ಪೊಲೀಸ್ ಪದಕಕ್ಕೆ ಆಯ್ಕೆ ಮಾಡಲಾಗಿದೆ.
Breaking News
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ದೃಶ್ಯ ಅಚ್ಚಪ್ಪ ಆಯ್ಕೆ*
- *ಹೆಬ್ಬಾಲೆ : ಜ.23 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಶ್ರೀ ರಾಮ ಜನ್ಮಭೂಮಿ ಸೇವಾ ಸಮಿತಿಯಿಂದ ಮಡಿಕೇರಿಯಲ್ಲಿ ಅನ್ನದಾನ*
- *ಜ.26 ರಂದು ಲೋಕಾಪ೯ಣೆಯಾಗಲಿದೆ ಮತ್ತೆ ವಸಂತ*
- *ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ*
- *ಎನ್.ಯು.ನಾಚಪ್ಪ ವಿರುದ್ಧ ಪ್ರಕರಣ : ಮಡಿಕೇರಿ ಕೊಡವ ಸಮಾಜ ಖಂಡನೆ*
- *ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿಗೆ ಪಿ.ಹೆಚ್.ಡಿ ಪದವಿ*