ನಾಪೋಕ್ಲು ಏ.3 : ಮೇರಿ ಮಾತೆ ದೇವಾಲಯದಲ್ಲಿ ಗರಿಗಳ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಚರ್ಚಿನ ಧರ್ಮ ಗುರುಗಳಾದ ಜ್ಞಾನ ಪ್ರಕಾಶ್ ತೆಂಗಿನ ಗರಿಗಳಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ದಿನದ ಮಹತ್ವದ ಬಗ್ಗೆ ಮಾತನಾಡಿದರು.
ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಭಕ್ತಾದಿಗಳಿಗೆ ಗರಿಗಳನ್ನು ವಿತರಿಸಲಾಯಿತು.
ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿದ್ದರು. (ವರದಿ : ದುಗ್ಗಳ ಸದಾನಂದ)









