ಜಮ್ಮು ಏ.3 : ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಬಳಿ ಡ್ರೋನ್ ಹಾರಾಟದ ಬಗ್ಗೆ ಸಂಶಯ ವ್ಯಕ್ತವಾಗಿದೆ. ಡ್ರೋನ್ ನಿಂದ ಬೀಳಿಸಲಾಗಿದೆ ಎನ್ನಲಾಗಿರುವ ಶಸ್ತ್ರಾಸ್ತ್ರಗಳನ್ನು ಪೊಲೀಸರು ಸೋಮವಾರ ವಶಪಡಿಸಿಕೊಂಡಿದ್ದಾರೆ.
ಮುಂಜಾನೆ ರಖ್ ಬರೋತಿಯ ರೈಲ್ವೆ ಮಾರ್ಗದ ಬಳಿ ಮೂರು ಪಿಸ್ತೂಲ್ ಮತ್ತು 4 ಗ್ರೆನೇಡ್‌ಗಳು ಪತ್ತೆಯಾಗಿವೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಸಾಂಬಾ) ಸುರೀಂದರ್ ಚೌಧರಿ ತಿಳಿಸಿದ್ದಾರೆ.
ಹೊಲದಲ್ಲಿ ಶಂಕಿತ ಶಸ್ತ್ರಾಸ್ತ್ರ ಬಿದ್ದಿರುವ ಬಗ್ಗೆ ಮಾಹಿತಿ ದೊರೆತ ತಕ್ಷಣ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ತಂಡ ಕಾರ್ಯಾಚರಣೆ ನಡೆಸಿತು.













