ಜಾರ್ಖಂಡ್ ಏ.3 : ಜಾರ್ಖಂಡ್ ರಾಜ್ಯದ ಛತ್ರದಲ್ಲಿ ಸಿಆರ್‌ಪಿಎಫ್ ಕೋಬ್ರಾ ಬೆಟಾಲಿಯನ್, ಜೆಎಪಿ ಮತ್ತು ಐಆರ್‌ಬಿ, ಪಲಾಮು ಮತ್ತು ಚತ್ರಾ ಜಿಲ್ಲೆಗಳ ಪೊಲೀಸ್ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಐವರು ನಕ್ಸಲರು ಬಲಿಯಾಗಿದ್ದಾರೆ.
ಹತ್ಯೆಗೀಡಾದ ಐವರ ಪೈಕಿ ಇಬ್ಬರಿಗೆ ತಲಾ 25 ಲಕ್ಷ ರೂ. ಹಾಗೂ ಮೂವರಿಗೆ ತಲಾ 5 ಲಕ್ಷ ರೂ ಇನಾಮು ಘೋಷಣೆ ಮಾಡಲಾಗಿತ್ತು. ಹತ್ಯೆಯಾದ ನಕ್ಸಲರಿಂದ ಎಕೆ 47, ಇನ್ಸಾಸ್ ರೈಫಲ್ಸ್ ನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.













