ಮಡಿಕೇರಿ ಏ.3 : ಗಾಳಿಬೀಡು ಅಡ್ಕದಬಾಣೆ ಸ್ನೇಹಿತರ ಯುವಕ ಸಂಘದ 40ನೇ ವಾರ್ಷಿಕೋತ್ಸವ ಹಾಗೂ ಯುಗಾದಿ ಹಬ್ಬದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟ, ಜಿಲ್ಲಾ ಮಟ್ಟದ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿ ನಡೆಯಿತು.
ನೆಹರು ಯುವ ಕೇಂದ್ರ, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಡಿಕೇರಿ, ಜಿಲ್ಲಾ ಯುವ ಒಕ್ಕೂಟ ಕೊಡಗು, ತಾಲೂಕು ಯುವ ಒಕ್ಕೂಟ ಮಡಿಕೇರಿ ಹಾಗೂ ಗಾಳಿಬೀಡು ಅಡ್ಕದಬಾಣೆ ಸ್ನೇಹಿತರ ಯುವಕ ಸಂಘ, ಶ್ರೀ ಮಾದುರಪ್ಪ ಶ್ರೀನಿಧಿ ಮತ್ತು ತ್ರಿವೇಣಿ ಸ್ವಸಹಾಯ ಸಂಘಗಳ ಸಂಯುಕ್ತಾಶ್ರಯದಲ್ಲಿ ಗಾಳಿಬೀಡು ಅಡ್ಕದಬಾಣೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಿದ್ದು, ಬ್ಲ್ಯಾಕ್ ಪ್ಯಾಂತರ್ಸ್ ದೇವಸ್ತೂರು ತಂಡ ಪ್ರಥಮ ಮತ್ತು ಸಿಸಿಎಲ್ ಗಾಳಿಬೀಡು ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಥ್ರೋಬಾಲ್ ಪಂದ್ಯಾವಳಿಯಲ್ಲಿ ವನಶ್ರೀ ವರಡಾತಂಡ ಪ್ರಥಮ, ಗಾಳಿಬೀಡು ಫ್ರೆಂಡ್ಸ್ ದ್ವಿತೀಯ ಬಹುಮಾನ ಗೆದ್ದುಕೊಂಡಿತು.
ಮಕ್ಕಳು ಹಾಗೂ ಹಿರಿಯರು ಗ್ರಾಮೀಣ ಕ್ರೀಡೆಗಳಲ್ಲಿ ಪಾಲ್ಗೊಂಡು ಗಮನ ಸೆಳೆದರು. ಇದೇ ಸಂದರ್ಭ ರಕ್ತದಾನ ಶಿಬಿರ ನಡೆಯಿತು.
ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಮಾಜ ಸೇವಕ ಡಾ.ಮಂಥರ್ ಗೌಡ, 40 ವರ್ಷಗಳ ಸುದೀರ್ಘ ಅವಧಿಯಿಂದ ಸಂಘ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಯುಗಾದಿ ಹಬ್ಬ ಮತ್ತು ಗ್ರಾಮೀಣ ಕ್ರೀಡೆಗಳ ಕುರಿತು ವಿವರಿಸಿದರು.
2021-22ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಬಿ.ಸಿ.ಟೀನಾ ಹಾಗೂ ಎಂ.ಎನ್.ಪೂರ್ಣಿಮ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಹಿರಿಯರಾದ ಬಿ.ಎಂ.ದೇವಮ್ಮ ಹಾಗೂ ಎಂ.ರಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*