ನಾಪೋಕ್ಲು ಏ.4 : ಮೂರ್ನಾಡು ವಿದ್ಯಾಸಂಸ್ಥೆಯ ಜನರಲ್ ಕೆ.ಎಸ್.ತಿಮ್ಮಯ್ಯ ಅಕಾಡೆಮಿ ಫಾರ್ ಸ್ಪೋಟ್ಸ್ ಅಂಡ್ ಗೇಮ್ಸ್ ವತಿಯಿಂದ 12ನೇ ವರ್ಷದ ಹಾಕಿ ಬೇಸಿಗೆ ಶಿಬಿರವನ್ನು ಏಕಲವ್ಯ ಪ್ರಶಸ್ತಿ ವಿಜೇತ ಪುದಿಯೊಕ್ಕಡ ಪ್ರಧಾನ್ ಸೋಮಣ್ಣ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಕ್ರೀಡಾಪಟುಗಳಲ್ಲಿ ಕ್ರೀಡೆಯ ಬಗ್ಗೆ ಅಪಾರ ಆಸಕ್ತಿ ಇರಬೇಕು. ಕ್ರೀಡೆ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿ. ಕ್ರೀಡೆಯನ್ನು ಕೇವಲ ಮನೋರಂಜನೆಗಾಗಿ ಮಾತ್ರವೆಂದು ಪರಿಗಣಿಸಿದೆ ಪೂರ್ಣಕಾಲಿಕ ಉದ್ಯೋಗವಾಗಿ ಮಾರ್ಪಾಡು ಮಾಡಿಕೊಂಡು ಜೀವನದಲ್ಲಿ ಮುಂದೆ ಬರಬಹುದೆಂದು ಕಿವಿ ಮಾತುಹೇಳಿದ ಪ್ರಧಾನ್ ಕ್ರೀಡೆಯಲ್ಲಿ ಯಶಸ್ಸು ಕಾಣಲು ಪೋಷಕರ ಸಹಕಾರ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭ ಜನರಲ್ ಕೆ.ಎಸ್. ತಿಮ್ಮಯ್ಯ ಅಕಾಡೆಮಿಯ ನಿರ್ದೇಶಕ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಸಂಸ್ಥೆಯ ನಿರ್ದೇಶಕ ಮೂಡೇರ ಕಾಳಯ್ಯ, ಸಂಸ್ಥೆಯ ಉಪಾಧ್ಯಕ್ಷ ಪುದಿಯೊಕ್ಕಡ ಸುಬ್ರಮಣಿ ಹಾಗೂ ತರಬೇತುದಾರರು ಹಾಗೂ ಶಿಕ್ಷಕ ವರ್ಗದವರು ಹಾಗೂ ಕ್ರೀಡಾಭಿಮಾನಿಗಳು ಪಾಲ್ಗೊಂಡಿದ್ದರು.
ಶಿಬಿರವು ಪ್ರತಿದಿನ ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ ನಡೆಯಲಿದೆ.
ವರದಿ : ದುಗ್ಗಳ ಸದಾನಂದ