ಮಡಿಕೇರಿ ಏ.4 : ವಿರಾಜಪೇಟೆಯ ಕೆದಮುಳ್ಳೂರು ಗ್ರಾಮದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು.
ಏ.1 ರಂದು ಕೊಟ್ಟಿಪಾಡುವುದರೊಂದಿಗೆ ಹಬ್ಬಕ್ಕೆ ಚಾಲನೆ ದೊರೆಯಿತು. ನಂತರ ತಕ್ಕರ ಮನೆಯಿಂದ ಬಂಢಾರ ತರುವುದು, ಮೇಲೇರಿ ಹಾಕುವುದು, ನಾನಾ ತೆರೆ (ಕೋಲ)ಗಳು ನಡೆಯಿತು.
ವಿಷ್ಣುಮೂರ್ತಿ ಕೋಲವು ನಡೆದು ದೇವಾಲಯದ ಮುಂದೆ ಸಿದ್ಧಪಡಿಸಲಾಗಿರುವ ಮೇಲೇರಿ ಗುಡ್ಡೆ(ಬೆಂಕಿ ಕೆಂಡದ) ಮೇಲೆ 101 ಬಾರಿ ಮೇಲೇರಿ ಬೀಳಲಾಯಿತು. ಇದಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.
ಮಧ್ಯಾಹ್ನ ಚಾಮುಂಡಿ ದೇವಿಯ ಕೋಲ ನಡೆಯಿತು.
ಉತ್ಸವದ ಕೊನೆಯ ತೆರೆಗೆ ಉದ್ದನೆಯ ಬಿದಿರಿನಿಂದ ತಯಾರಿಸಿದ, ಶೃಂಗಾರಗೊಳಿಸಿದ ಕೆಂಪು ವಸ್ತ್ರದ ಮುಡಿಯನ್ನು ಏರಿಸಲಾಗುತ್ತದೆ. ಸಂಜೆ ದೇವರ ಬನಕ್ಕೆ ತೆರಳಿ ಅಲ್ಲಿ ಪೂಜಾ ವಿಧಿ ವಿಧಾನಗಳನ್ನು ಪೂರೈಸಿದ ಬಳಿಕ ವಾರ್ಷಿಕ ತೆರೆ ಮಹೋತ್ಸವ ಸಂಪನ್ನಗೊಂಡಿತು.
ಕೆದಮುಳ್ಳುರು ಚಾಮುಂಡಿ ಹಬ್ಬ ಎಲ್ಲೆಡೆ ಪ್ರಚಲಿತದಲ್ಲಿದ್ದು, ಅತ್ಯಂತ ಹೆಸರುವಾಸಿಯಾಗಿದೆ. ಉತ್ಸವದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು, ದೂರದ ಊರುಗಳಿಂದ ಭಕ್ತರು ಪಾಲ್ಗೊಂಡಿದ್ದರು.
Breaking News
- *ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*
- *ಕರ್ನಾಟಕ ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ*
- *ಮಿಸ್ಟಿ ಹಿಲ್ಸ್ ನಿಂದ ಮಕ್ಕಳಿಗೆ ಸಾಹಸಕ್ರೀಡೆ*
- *ವಿಟಿಯು ರಾಜ್ಯಮಟ್ಟದ ಕಬಡ್ಡಿ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ*
- *ವೀರ ಸೇನಾನಿಗಳಿಗೆ ಅಗೌರವ : ಆಮ್ ಆದ್ಮಿ ಪಾರ್ಟಿ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ*
- *ವಿರಾಜಪೇಟೆ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯಿಂದ ಸ್ಥಳ ಪರಿಶೀಲನೆ*
- *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ*
- *ಕಬ್ಬಚ್ಚಿರ ರಶ್ಮಿ ಕಾರ್ಯಪ್ಪಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ*
- *ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು : ತೆನ್ನಿರ ಮೈನಾ ಶ್ಲಾಘನೆ*