ಬೆಂಗಳೂರು ಏ.4 : ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಮಂಗಳವಾರ ನಡೆದ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆಯ ನಂತರ 81 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂಬ ನಾಲ್ಕು ಪುಟಗಳ ಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ನಕಲಿ ಪಟ್ಟಿ ಎಂದು ಬಿಜೆಪಿಯ ಕರ್ನಾಟಕ ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬoಧಿಸಿದoತೆ ಏಪ್ರಿಲ್ 8 ರಂದು ಬಿಜೆಪಿ ತನ್ನ ಸಂಸದೀಯ ಮಂಡಳಿ ಸಭೆಯ ನಂತರ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.








