ಮಡಿಕೇರಿ ಏ.5 : ಗುಂಡು ಹೊಡೆದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿ ಸಮೀಪದ ಕಾಟಕೇರಿ ಗ್ರಾಮದಲ್ಲಿ ನಡೆದಿದೆ.
ಕಾಟಕೇರಿ ನಿವಾಸಿ ಕೆ.ಎ.ಉತ್ತಪ್ಪ (72) ಎಂಬುವವರೆ ಸಾವನ್ನಪ್ಪಿರುವ ವ್ಯಕ್ತಿ. ಬುಧವಾರ ಬೆಳಗ್ಗಿನ ಜಾವ ಉತ್ತಪ್ಪ ಅವರು ಕಾಫಿ ತೋಟದಲ್ಲಿ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ.
ಘಟನೆಗೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.









