ವಿರಾಜಪೇಟೆ ಏ.5 : ಬಿಟ್ಟಂಗಾಲ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಪೊನ್ನಿಮನೆ ಅಯ್ಯಪ್ಪ ಮತ್ತು ಬೋಟೆ ಚಾಮುಂಡಿ ದೇವರ ವಾರ್ಷಿಕ ಉತ್ಸವವು ಇದೇ ಏ.8 ಮತ್ತು 9 ರಂದು ಜರುಗಲಿದೆ.
ಉತ್ಸವದ ಅಂಗವಾಗಿ ಏ.8ರಂದು ಶನಿವಾರ ರಾತ್ರಿ 8 ಗಂಟೆಗೆ ಭಂಡಾರ ಹೊರಡುವುದು, 8.30 ಗಂಟೆಗೆ ದೇವಸ್ಥಾನದಲ್ಲಿ ಕೊಟ್ಟಿ ಪಾಟ್ ಮತ್ತು 10 ಗಂಟೆಗೆ ವಿವಿಧ ಧಾರ್ಮಿಕ ಕೋಲಗಳು ನಡೆಯಲಿದೆ. ಏ.9 ರಂದು ಬೆಳಿಗ್ಗೆ 9 ಗಂಟೆಗೆ ಬೋಟೆ ಚಾಮುಂಡಿ ಹಾಗೂ ವಿಷ್ಣುಮೂರ್ತಿ ದೇವರ ತೆರೆ ಸೇರಿದಂತೆ ವಿವಿಧ ತೆರೆಗಳು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ ಎಂದು ಬಿಟ್ಟಂಗಾಲದ ಪೊನ್ನಿರ ಕುಟುಂಬಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







